ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಸಾರ್ವಜನಿಕರ ಉಪಯೋಗಕ್ಕಾಗಿ ಪ್ಯಾನ್ ಸಿಟಿ ಐ.ಸಿ.ಟಿ ಕಾಮಗಾರಿಯಡಿ ಒಂದು ನಗರ, ಒಂದು ವೆಬ್‍ಸೈಟ್ ಹಾಗೂ ಮೊಬೈಲ್ ಅಪ್ಲಿಕೇಷನ್ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಆಧುನಿಕ ತಂತ್ರಜ್ಞಾನದಲ್ಲಿ ದಿನ ನಿತ್ಯಜೀವನಕ್ಕೆ ಅನುಕೂಲವಾಗುವ ಎಲ್ಲಾ ಅಗತ್ಯ ಸೌಲಭ್ಯಗಳು ಒಂದೇ ತಂತ್ರಾಂಶದಲ್ಲಿ ಪಡೆಯಬಹುದು.

ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಲಭ್ಯವಾಗಲಿದ್ದು, ಈ ವೆಬ್ ಪೋರ್ಟಲ್‌ನಲ್ಲಿ ಆನ್‍ಲೈನ್‍ನಲ್ಲಿ ಬಿಲ್ ಪಾವತಿ, ಪ್ರವಾಸಿ ತಾಣಗಳು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾಹಿತಿ, ಆಸ್ಪತ್ರೆಗಳ ವಿವರ ಹಾಗೂ ದಾವಣಗೆರೆ ನಗರಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪಡೆಯಬಹುದು.

ಸಾರ್ವಜನಿಕರ ಕುಂದು ಕೊರತೆಗಳನ್ನು ನೇರವಾಗಿ ರವಾನಿಸಿ ಮತ್ತು ಸಂಬಂಧಪಟ್ಟ ಇಲಾಖೆಗಳನ್ನು ಸಂಪರ್ಕಿಸಬಹುದಾದ ಹಾಗೂ ಸಾರ್ವಜನಿಕರ ದೂರುಗಳನ್ನು ಜೋಡಣೆ ಮಾಡಬಹುದಾದ ಸೌಲಭ್ಯವನ್ನು ಅಳವಡಿಸಲಾಗಿರುತ್ತದೆ. ತಂತ್ರಜ್ಞಾನ ಆಧಾರಿತ ಸೇವೆಗಳನ್ನು ನಾಗರಿಕರಿಗೆ ಒದಗಿಸುವ ಉದ್ದೇಶದಿಂದ ಮೊದಲ ಬಾರಿಗೆ ಪ್ರಾಯೋಗಿಕ ಹಂತದ ಮುಖಾಂತರ ಪರಿಶೀಲಿಸಲಾಗುವುದು.

ನಗರದ ಸಾರ್ವಜನಿಕರು ಇದನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ
ಮಾಡಿದ್ದಾರೆ.

ವೆಬ್‌ಸೈಟ್ ಲಿಂಕ್ https:/dvg.karnatakasmartcity.in ಮತ್ತು ಗೂಗಲ್ ಪ್ಲೇ ಸ್ಟೋರ್‌ನಲ್ಲಿDvg Smartcity One App ಮುಖಾಂತರ ಮೊಬೈಲ್ ಅಪ್ಲಿಕೇಶನ್ ಡೌನ್‍ಲೋಡ್ ಮಾಡಕೊಳ್ಳಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.