ಭಾನುವಾರ, ಜೂನ್ 20, 2021
20 °C

ಫೇಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಸೆಮಿಸ್ಟರ್ ಪರೀಕ್ಷೆಗಳಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಬೆಳಿಗ್ಗೆ ಟಿ.ವಿ.ಸ್ಟೇಷನ್ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರಸ್ವತಿ ನಗರದ ನಿವಾಸಿ ರಾಜಪ್ಪ ಅವರ ಪುತ್ರಿ ಸೃಷ್ಟಿ (20) ಆತ್ಮಹತ್ಯೆ ಮಾಡಿಕೊಂಡವರು.

ಬಿಐಇಟಿಯಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದ ಇವರು ಮೂರು ಹಾಗೂ ನಾಲ್ಕನೇ ಸೆಮಿಸ್ಟರ್‌ಗಳಲ್ಲಿ 9 ವಿಷಯಗಳಲ್ಲಿ ಫೇಲ್ ಆಗಿದ್ದರು. ಇದರಿಂದ ಮನನೊಂದು ಹೊರಗಡೆ ಹೋಗುತ್ತೇನೆ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕೆಟಿಜೆ ನಗರ ಠಾಣೆಗೆ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.