ದಾವಣಗೆರೆ: ದಾವಣಗೆರೆ ಜಿಲ್ಲಾಡಳಿತ ಭವನದ ಪಕ್ಕದಲ್ಲಿ ₹ 15.85 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸ್ಮಾರ್ಟ್‌ಸಿಟಿ ಕಚೇರಿ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಬುಧವಾರ ಉದ್ಘಾಟಿಸಿದರು.

ಸ್ಮಾರ್ಟ್‌ಸಿಟಿ ಕಚೇರಿ ಇದುವರೆಗೂ ಖಾಸಗಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಕಟ್ಟಡದ ನೆಲಮಹಡಿ ಸಿದ್ಧಗೊಂಡಿರುವ ಕಾರಣ ಕಚೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಇದರಿಂದ ಬಾಡಿಗೆ ಮೊತ್ತ ಸರ್ಕಾರಕ್ಕೆ ಉಳಿತಾಯವಾಗಲಿದೆ. ಕಟ್ಟಡ ಸಂಪೂರ್ಣಗೊಂಡ ಬಳಿಕ, ಮುಖ್ಯಮಂತ್ರಿಗಳನ್ನು ಆಹ್ವಾನಿಸಿ, ಇನ್ನೊಮ್ಮೆ ಪೂರ್ಣ ಪ್ರಮಾಣದಲ್ಲಿ ಉದ್ಘಾಟನೆ ಸಮಾರಂಭ ಏರ್ಪಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಅಗ್ನಿಶಾಮಕದಳಕ್ಕೆ 1 ಕೋಟಿ ವೆಚ್ಚದಲ್ಲಿ ಆಧುನಿಕ ಅಗ್ನಿಶಾಮಕ ವಾಹನ ಹಾಗೂ ಪೂರಕ ಉಪಕರಣಗಳನ್ನು ನೀಡಲಾಗಿದೆ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಧೂಡಾ ಅಧ್ಯಕ್ಷ ಎನ್.ಎಚ್. ಶಿವಕುಮಾರ್, ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಸದಸ್ಯೆ ಉಮಾ ಪ್ರಕಾಶ್, ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.