ಮಂಗಳವಾರ, ಫೆಬ್ರವರಿ 25, 2020
19 °C

13ರಿಂದ ಟೆನಿಸ್ ಟೂರ್ನಿ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ದಾವಣಗೆರೆ ಡಿಸ್ಟ್ರಿಕ್ಸ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಬಾಲಕರ ಸರ್ಕಾರಿ ಕಿರಿಯ ಕಾಲೇಜು ಆವರಣದಲ್ಲಿ ಟೆನಿಸ್ ಪಂದ್ಯಾವಳಿಯನ್ನು ಡಿ. 13 ರಂದು ಬೆಳಗ್ಗೆ 9 ಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಕೆ.ಪಿ. ಚಂದ್ರಪ್ಪ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾಬಸವಂತಪ್ಪ ಪಾಲ್ಗೊಳ್ಳಲಿದ್ದು, ಡಿ. 15ರಂದು ಸಂಜೆ 6ಕ್ಕೆ ಶಾಸಕ ರವೀಂದ್ರನಾಥ್ ಬಹುಮಾನ ವಿತರಣೆ ಮಾಡಲಿದ್ದಾರೆ. ಕಳೆದ ಬಾರಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 300 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಬಾರಿಯೂ ಹೆಚ್ಚಿನ ನಿರೀಕ್ಷೆ ಇದೆ. ವಿಜೇತರಿಗೆ ₹1.15 ಲಕ್ಷದವರೆಗೂ ಬಹುಮಾನ ಹಾಗೂ ಆಕರ್ಷಕ ಪಾರಿತೋಷಕ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಡಾ.ಎಸ್.ಎಂ. ಬ್ಯಾಡಗಿ, ಸಿ.ಎಸ್. ಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)