ಬುಧವಾರ, ಅಕ್ಟೋಬರ್ 20, 2021
24 °C

ಕೊಟ್ಟಿಗೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಕೋಳಿ, ಎಮ್ಮೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಯಕೊಂಡ: ದಾವಣಗೆರೆ ತಾಲ್ಲೂಕಿನ ಹುಚ್ಚವ್ವನಹಳ್ಳಿ ವಡ್ಡರಹಟ್ಟಿಯಲ್ಲಿ ದುಷ್ಕರ್ಮಿಗಳು ಪೆಟ್ರೋಲು ಸುರಿದು ದನದ ಕೊಟ್ಟಿಗೆಗೆ ಬೆಂಕಿ ಹಚ್ಚಲಾಗಿದೆ. ಒಂದು ಎಮ್ಮೆ ಸತ್ತಿದೆ. ಇನ್ನೊಂದು ಸಾವು ಬದುಕಿನ ಹೋರಾಟದಲ್ಲಿದೆ. 10ಕ್ಕೂ ಅಧಿಕ ಕೋಳಿಗಳು ಸುಟ್ಟುಹೋಗಿವೆ.

ವಡ್ಡರಹಟ್ಟಿಯ ಹನುಮಂತಪ್ಪ ಎನ್ನುವರಿಗೆ ಸೇರಿದ ಕೊಟ್ಟಿಗೆ ಇದಾಗಿದೆ. ಯಾರೋ ವೈಯಕ್ತಿಕ ದ್ವೇಷ ಇಟ್ಟುಕೊಂಡು ಬೆಂಕಿ ಹಚ್ಚಿರಬೇಕು ಎಂದು ಶಂಕಿಸಲಾಗಿದೆ. ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಹನುಮಂತ ಅವರಿಗೆ ಪರಿಹಾರ ನೀಡಬೇಕು ಎಂದು ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಮಾಯಕೊಂಡ ಠಾಣೆ ಪೊಲೀಸ ಭೇಟಿ ಪರಿಶೀಲನೆ ನಡೆಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು