ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾಳಿಯಲ್ಲಿ 28ರಂದು ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟನೆ: ಡಿಸಿ

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ
Last Updated 25 ಜೂನ್ 2021, 2:48 IST
ಅಕ್ಷರ ಗಾತ್ರ

ಹೊನ್ನಾಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಆಮ್ಲಜನಕ ಉತ್ಪಾದನಾ ಘಟಕವನ್ನು ಸೋಮವಾರ ಉದ್ಘಾಟಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಯ ಎಡಭಾಗದಲ್ಲಿ ನಿರ್ಮಾಣವಾಗುತ್ತಿರುವ ಆಮ್ಲಜನಕ ಉತ್ಪಾದನಾ ಘಟಕವನ್ನು ಗುರುವಾರ ಪರಿಶೀಲಿಸಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಶಾಸಕ ಎಂ.ಪಿ. ರೇಣುಕಾಚಾರ್ಯ ಉದ್ಘಾಟನೆ ನೆರವೇರಿಸುವರು ಎಂದು ಮಾಹಿತಿ ನೀಡಿದರು.

ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಲಾಕ್‌ಡೌನ್‌ನ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಿದ್ದರೂ ಸಾರ್ವಜನಿಕರು ಸರ್ಕಾರದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸ ಬೇಕು ಎಂದು ಮನವಿ ಮಾಡಿದರು.

ಘಟಕದ ಟೆಕ್ನಿಕಲ್ ಎಂಜಿನಿಯರ್ ನಾಗೇಂದ್ರ ಪ್ರಸಾದ್, ‘₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಘಟಕದ ನಿರ್ವಹಣೆ ಸಂಬಂಧ ಇಬ್ಬರು ವೈದ್ಯರು ಮತ್ತು ಸಿಬ್ಬಂದಿಗೆ ತರಬೇತಿ ನೀಡಿ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗುವುದು. ಸಮಸ್ಯೆ ಕಂಡುಬಂದರೆ ಕಂಪನಿ ಮೂಲಕವೇ ಬಗೆಹರಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ತಹಶೀಲ್ದಾರ್ ಬಸನಗೌಡ ಕೋಟೂರ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಚಂದ್ರಪ್ಪ, ಭೂಸೇನಾ ನಿಗಮದ ಕೆಂಚಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT