ಭಾನುವಾರ, ಅಕ್ಟೋಬರ್ 24, 2021
21 °C

ಮಲೇಬೆನ್ನೂರು: ಭತ್ತದ ಗದ್ದೆಗಳು ಜಲಾವೃತ

 ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಲೇಬೆನ್ನೂರು: ಪ್ರಸಕ್ತ ಹಸ್ತಾ ಮಳೆ ಆರ್ಭಟ ಮುಂದುವರಿದಿದ್ದು, ಹೋಬಳಿ ವ್ಯಾಪ್ತಿಯ ಗುಳದಹಳ್ಳಿ, ಸಂಕ್ಲೀಪುರ, ಆದಾಪುರ, ನಿಟ್ಟೂರು ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತವಾಗಿವೆ.

ಎರಡು ದಿನಗಳಿಂದ ಸಂಜೆಯ ಬಳಿಕ ಸಿಡಿಲು, ಗುಡುಗು, ಮಿಂಚಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ.

ಇದರಿಂದಾಗಿ ತಗ್ಗು ಪ್ರದೇಶದ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಜಲಾವೃತವಾಗಿವೆ. ಮೆಕ್ಕೆಜೋಳದ ಹೊಲಗಳಲ್ಲಿ ನೀರು ನಿಂತಿದೆ. ಕೆಲವೆಡೆ ಒಡ್ಡು ಒಡೆದಿವೆ ಎಂದು ಕೊಮಾರನಹಳ್ಳಿ, ಹಾಲಿವಾಣ, ಕೊಪ್ಪದ ರೈತರು ಆತಂಕ ವ್ಯಕ್ತಪಡಿಸಿದರು.

ಮಳೆಯಿಂದ ಹೆಂಚು ಹಾಗೂ ತಾರಸಿ ಮನೆಗಳಲ್ಲಿ ನೀರು ಸುರಿಯುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.