ದಾವಣಗೆರೆ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಎಸ್ಸಿ ಮತ್ತು ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದರು ಜಮಾಯಿಸಿದ ಪ್ರತಿಭಟನಕಾರರು ಅಲೆಮಾರಿ ಸಮುದಾಯದ ವೇಷದೊಂದಿಗೆ ಗಮನ ಸೆಳೆದರು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಕಚೇರಿಗೆ ಮನವಿ ರವಾನಿಸಿದರು.

ಮಾಜಿ ಸಚಿವ ಎಚ್. ಆಂಜನೇಯ ನೇತೃತ್ವದಲ್ಲಿ ಜುಲೈ 5ರಂದು ಬೆಂಗಳೂರಿನಲ್ಲಿ ಕರೆದಿದ್ದ ಸಭೆಗೆ ಪಲ್ಲವಿ ಅವರಿಗೆ ಆಹ್ವಾನ ಇರಲಿಲ್ಲ. ಆಹ್ವಾನ ನೀಡದಿದ್ದರೂ ಸಭೆಗೆ ಹಾಜರಾಗಿ ಗೊಂದಲ ಸೃಷ್ಟಿಸಿದರು. ಅಲೆಮಾರಿ ಸಮುದಾಯದ ಮುಖಂಡರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದರು. ಕೆಲವರು ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮುದಾಯದ ಏಳು ಮುಖಂಡರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಠಾಣೆಗೆ ನೀಡಿದ ದೂರು ಕೂಡಲೇ ಹಿಂಪಡೆಯಬೇಕು. ಪಲ್ಲವಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.

ಮಹಾಸಭಾದ ರಾಜ್ಯ ಘಟಕದ ರಾಜ್ಯ ಘಟಕದ ಅಧ್ಯಕ್ಷ ವಿ. ಸಣ್ಣ ಅಜ್ಜಯ್ಯ, ಮುಖಂಡರಾದ ಎನ್.ಡಿ. ಮಂಜಪ್ಪ, ಶಿವಣ್ಣ, ಎಸ್.ಕೆ. ವೀರೇಶ್ ಕುಮಾರ್, ಚಿನ್ನರೆಡ್ಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.