ಬೆಳಿಗ್ಗೆ 6ರಿಂದ ಪಡಿತರ ವಿತರಣೆ
‘ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 8ರವರೆಗೆ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್ ಸೂಚನೆ ನೀಡಿದರು. ‘ಯುವನಿಧಿ ಯೋಜನೆ ಬಗ್ಗೆ ಸಾಕಷ್ಟು ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲ. ಜಿಲ್ಲೆಯ ಶಾಲಾ- ಕಾಲೇಜುಗಳಲ್ಲಿ ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಅಭಿಯಾನ ಹಮ್ಮಿಕೊಂಡು ವ್ಯಾಪಕ ಅರಿವು ಮೂಡಿಬೇಕು’ ಎಂದು ತಾಕೀತು ಮಾಡಿದರು.