ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಪರಿಸರ ಸಂರಕ್ಷಣೆ ಸಾಂವಿಧಾನಿಕ ಕರ್ತವ್ಯ’

ಜಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ:
Published 5 ಜೂನ್ 2024, 15:48 IST
Last Updated 5 ಜೂನ್ 2024, 15:48 IST
ಅಕ್ಷರ ಗಾತ್ರ

ಜಗಳೂರು: ‘ಪರಿಸರ ಸಂರಕ್ಷಣೆ ಪ್ರತಿ ನಾಗರಿಕರ ಸಾಂವಿಧಾನಿಕ ಕರ್ತವ್ಯವಾಗಿದೆ’ ಎಂದು ಪಟ್ಟಣದ ಸಿವಿಲ್ ಮತ್ತು ಜೆಎಂಎಫ್‌ ನ್ಯಾಯಾಲಯದ ನ್ಯಾಯಾಧೀಶ ಆರ್.ಚೇತನ್ ಅಭಿಪ್ರಾಯಪಟ್ಟರು.

ಪಟ್ಟಣದ ಕೋರ್ಟ್ ಆವರಣದಲ್ಲಿ ಬುಧವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ಪ್ರಾದೇಶಿಕ ಹಾಗೂ ಸಾಮಾಜಿಕ ವಲಯ ಅರಣ್ಯ ಇಲಾಖೆಮತ್ತು ವಕೀಲರ ಸಂಘದ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರಕೃತಿಯಲ್ಲಿನ ಗಿಡ– ಮರಗಳನ್ನು ಕಾಳಜಿವಹಿಸಿ ರಕ್ಷಿಸಿದರೆ ಮನುಷ್ಯ ಹಾಗೂ ಪ್ರಾಣಿ, ಪಕ್ಷಿ ಸಂಕುಲಕ್ಕೆ ಶುದ್ಧ, ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ. ಇದರಿಂದ ಪ್ರಾಕೃತಿಕ ಸಮತೋಲನ ಕಾಪಾಡಲು ಸಾಧ್ಯ’ ಎಂದರು.

‘ಪ್ರಕೃತಿ ನಾಶದಿಂದ ಜೀವ ಸಂಕುಲಕ್ಕೆ ಆಪತ್ತು ಎದುರಾಗಿದೆ. ಸಸಿ ನೆಡುವ ಕಾರ್ಯಕ್ರಮಗಳು ಕೇವಲ ಪರಿಸರ ದಿನಾಚರಣೆಗೆ, ದಾಖಲೆಗಾಗಿ ಸೀಮಿತವಾಗದೆ ವರ್ಷವಿಡೀ ನಮ್ಮ ಪರಿಸರದಲ್ಲಿ ಸಸಿಗಳನ್ನು ನೆಟ್ಟು ಲಾಲನೆ ಪಾಲನೆ ಮಾಡಬೇಕು. ಗಿಡಮರಗಳನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು’ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರೇನಹಳ್ಳಿ ಟಿ.ಬಸವರಾಜ್ ಹೇಳಿದರು.

ವಿಶ್ವಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಅಭಿಯಾನದಡಿ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕೋರ್ಟ್ ಮತ್ತು ತಾಲ್ಲೂಕು ಪಂಚಾಯಿತಿ ಆವರಣ, ಬಿದರಕೆರೆ, ಪಲ್ಲಾಗಟ್ಟೆ, ತಮಲೇಹಳ್ಳಿ ಸೇರಿ ಗ್ರಾಮೀಣ ಭಾಗದ ವಿವಿಧ ಶಾಲೆ– ಕಾಲೇಜುಗಳ ಆವರಣಗಳಲ್ಲಿ ಕನಿಷ್ಠ 10,000ಕ್ಕೂ ಅಧಿಕ ವಿವಿಧ ಬಗೆಯ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಮಹತ್ವದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಬಿ.ಟಿ. ಶ್ರೀನಿವಾಸ್ ಮನವಿ ಮಾಡಿದರು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಹೇಶ್ವರಪ್ಪ, ವಕೀಲರ ಸಂಘದ ಕಾರ್ಯದರ್ಶಿ ಎ.ಕೆ.ಪರಶುರಾಮಪ್ಪ, ವಕೀಲರಾದ ಕೆ.ವಿ ರುದ್ರೇಶ್, ಆರ್.ಓಬಳೇಶ್, ಸಿ. ಬಸವರಾಜ್, ನಾಗೇಶ್, ತಿಪ್ಪೇಸ್ವಾಮಿ, ಶ್ರೀನಿವಾಸ್, ಅರಣ್ಯ ಇಲಾಖೆಯ ಹಾಲೇಹಳ್ಳಿ ನಾಗರಾಜ್, ಚೇತನ್ ಇದ್ದರು.

 ಜಗಳೂರಿನ ನ್ಯಾಯಾಲಯದ ಆವರಣದಲ್ಲಿ ಬುಧವಾರ ವಿಶ್ವಪರಿಸರ ದಿನಾಚರಣೆ ಅಂಗವಾಗಿ ನ್ಯಾಯಾಧೀಶ ಾರ್. ಚೇತನ್ ಅವರ ನೇತೃತ್ವದಲ್ಲಿ ಸಸಿ ನೆಡುತೋಪಿಗೆ ಚಾಲನೆ ನೀಡಲಾಯಿತು. ವಕೀಲರ ಸಂಘದ ಅಧ್ಯಕ್ಷ ಮರೇನಹಳ್ಳಿ ಬಸವರಾಜ್  ಆರ್.ಎಫ್.ಒ ಶ್ರೀನಿವಾಸ ನಾಯ್ಕ ಇದ್ದರು.
 ಜಗಳೂರಿನ ನ್ಯಾಯಾಲಯದ ಆವರಣದಲ್ಲಿ ಬುಧವಾರ ವಿಶ್ವಪರಿಸರ ದಿನಾಚರಣೆ ಅಂಗವಾಗಿ ನ್ಯಾಯಾಧೀಶ ಾರ್. ಚೇತನ್ ಅವರ ನೇತೃತ್ವದಲ್ಲಿ ಸಸಿ ನೆಡುತೋಪಿಗೆ ಚಾಲನೆ ನೀಡಲಾಯಿತು. ವಕೀಲರ ಸಂಘದ ಅಧ್ಯಕ್ಷ ಮರೇನಹಳ್ಳಿ ಬಸವರಾಜ್ ಆರ್.ಎಫ್.ಒ ಶ್ರೀನಿವಾಸ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT