ಬುಧವಾರ, ನವೆಂಬರ್ 25, 2020
19 °C

ಜಗಳೂರು ಪ.ಪಂ ಚುನಾವಣೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಗಳೂರು:‌ ಎರಡು ವರ್ಷಗಳ ನಂತರ ಪಟ್ಟಣ ಪಂಚಾಯಿತಿಗೆ ನ. 9ರಂದು ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎನ್ನುವುದು ಕುತೂಹಲ ಕೆರಳಿಸಿದೆ.

ಒಟ್ಟ 18 ಸ್ಥಾನಗಳ ಪೈಕಿ ಬಿಜೆಪಿ 11, ಕಾಂಗ್ರೆಸ್ 5 ಹಾಗೂ ಜೆಡಿಎಸ್ 2 ಸದಸ್ಯರನ್ನು ಹೊಂದಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ.

ಸತತ 3ನೇ ಬಾರಿ ಗೆದ್ದಿರುವ ಬಿಜೆಪಿಯ ಆರ್. ತಿಪ್ಪೇಸ್ವಾಮಿ ಹಾಗೂ ಲಲಿತಮ್ಮ ಶಿವಣ್ಣ, ಪಾಪಲಿಂಗಪ್ಪ ಮತ್ತು ರೇವಣ್ಣ ಅವರು ಅಧ್ಯಕ್ಷಗಾದಿಯ ಪ್ರಬಲ ಸ್ಪರ್ಧಿಗಳಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಎದುರಾಗಿದ್ದು, ಶಾಸಕ ಎಸ್.ವಿ. ರಾಮಚಂದ್ರ ಅವರ ತೀರ್ಮಾನವೇ ಅಂತಿಮವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.