ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆಗಳ ಈಡೇರಿಕೆಗೆ ಪಿಡಿಒಗಳ ಮನವಿ

Last Updated 27 ಮೇ 2022, 4:23 IST
ಅಕ್ಷರ ಗಾತ್ರ

ದಾವಣಗೆರೆ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಯಿಂದ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಭಡ್ತಿ ನೀಡಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

2006–07ರಿಂದ 2011–12ರ ವರೆಗೆ ಮನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ತನಿಖೆ ಮಾಡಲು ಲೋಕಾಯುಕ್ತಕ್ಕೆ ವಹಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು. 8 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗ್ರೂಪ್ ಬಿ ಗೆ ಮೇಲ್ದರ್ಜೆಗೇರಿಸಬೇಕು. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ನಿಯಮವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಶೇ 70ರಷ್ಟು ಗ್ರಾಮೀಣ ಜನರನ್ನು ಪ್ರತಿನಿಧಿಸುವುದರೊಂದಿಗೆ, ಗ್ರಾಮ ಮಟ್ಟದ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಚರಂಡಿ ಸ್ವಚ್ಛತೆ, ತ್ಯಾಜ್ಯ ವಿಲೇವಾರಿ, ರಸ್ತೆ ಸಂಪರ್ಕ, ವಸತಿ, ನರೇಗಾ ಯೋಜನೆಯಡಿ ಉದ್ಯೋಗ ಇತ್ಯಾದಿ ಸೌಲಭ್ಯಗಳನ್ನು ನೀಡುವುರೊಂದಿಗೆ 29 ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡುವ ಹೊಣೆ ಪಿಡಿಒಗಳಿಗೆ ಇರುತ್ತದೆ ಎಂದು ಸಂಘದ ಅಧ್ಯಕ್ಷ ಡಿ. ಶಿವಕುಮಾರ್ ತಿಳಿಸಿದರು.

‘ಪಿಡಿಒಗಳು ಕಡಿಮೆ ಸಿಬ್ಬಂದಿಯೊಂದಿಗೆ ಅಧಿಕ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. 15 ದಿನಗಳ ಒಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯದಾದ್ಯಂತ ಮುಂದಿನ ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಸಂಘದ ಪದಾಧಿಕಾರಿಗಳಾದ ಐ.ಬಿ. ಸುರೇಖಾ, ಪರಮೇಶ್ ಕೊಲ್ಲೂರು, ಶರಣಪ್ಪ ಮಲವನಶೆಟ್ಟಿ, ತಿಪ್ಪೇಸ್ವಾಮಿ, ಅಭಿಜಿತ್, ನಾಗರಾಜ್, ಉಮೇಶ್, ರೇಣುಕಾ ಪ್ರಸಾದ್, ಎಂ.ವಿ. ರವಿ, ಶಿರಿನ್‌ತಾಜ್, ಸವಿತ ಬಾಯಿ, ಮರುಳಸಿದ್ದಪ್ಪ, ಲೋಹಿತ್, ಯೋಗೇಶ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT