ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಕಾಂಗ್ರೆಸ್ ಕಾರ್ಮಿಕ ವಿಭಾಗದ ಪ್ರತಿಭಟನೆ

ದಾವಣಗೆರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ಶುಕ್ರವಾರ ನಗರದ ವಿವಿಧ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಸಂಕಷ್ಟದಲ್ಲಿ ಆಂಬುಲೆನ್ಸ್ ಗಳಿಗೂ ಪೆಟ್ರೋಲ್ ಹಾಕದ ಸ್ಥಿತಿ ಇದೆ ಎಂದು ದೂರಿದರು. ಕೋವಿಡ್ ಸೋಂಕಿತರನ್ನು ಕೈಗಾಡಿಯಲ್ಲಿ ಮಲಗಿಸಿ ಆಸ್ಪತ್ರೆಗೆ ಒಯ್ಯುವ ಅಣಕು ಕಾರ್ಯಾಚರಣೆ ನಡೆಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.