ಗುರುವಾರ , ಜುಲೈ 29, 2021
23 °C
ಕಾಂಗ್ರೆಸ್ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ  ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಶಾಮನೂರು ರಸ್ತೆಯಲ್ಲಿರುವ ಮಹಾನಂದಿ ಪೆಟ್ರೋಲ್ ಬಂಕ್ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ ಮಾತನಾಡಿ, ‘ಯುಪಿಎ ಸರ್ಕಾರದಲ್ಲಿ ಕಚ್ಚಾತೈಲ ಬೆಲೆ ಹೆಚ್ಚಿದ್ದರೂ  ಪೆಟ್ರೋಲ್ ಬೆಲೆ ₹80 ದಾಟಿರಲಿಲ್ಲ, ಆದರೆ ಈಗ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಡೀಸೆಲ್ ಬೆಲೆ ಪ್ರತಿದಿನ ಏರುತ್ತಾ ಹೋಗುತ್ತಿದೆ. ಇದರಿಂದ ಅಗತ್ಯವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು ನಾಗರಿಕರಿಗೆ ತೊಂದರೆಯಾಗಿದೆ’ ಎಂದು ಹೇಳಿದರು.

ಪಾಲಿಕೆ ಸದಸ್ಯ ಕೆ.ಚಮನ್ ಸಾಬ್, ‘ಬೆಲೆ ಏರಿಕೆ ಇದೇ ರೀತಿ ಮುಂದುವರೆದರೆ ಜನಸಾಮಾನ್ಯರು ಜೀವನ ಸಾಗಿಸುವುದೇ ಕಷ್ಟವಾಗುತ್ತದೆ’ಎಂದರು.

ಸೋಮಲಾಪುರದ ಹನುಮಂತಪ್ಪ, ಆಶಾ ಮುರುಳಿ, ಕೋಳಿ ಇಬ್ರಾಹಿಂ, ಮುಜಾಹಿದ್ ಮಾತನಾಡಿದರು. ಇದೇ ಚೀನಾ ದಾಳಿಯಿಂದ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಕಲ್ಲಳ್ಳಿ ನಾಗರಾಜ್, ವಿನಾಯಕ ಪೈಲ್ವಾನ್, ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಎಸ್.ಎಂ. ರುದ್ರೇಶ್, ಎಚ್. ಜಯಪ್ಪ, ಸಾಮಾಜಿಕ ಜಾಲತಾಣದ ಕೆ.ಎಲ್. ಹರೀಶ್ ಬಸಾಪುರ, ಬಾತಿ ಶಿವಕುಮಾರ್, ರಘು ದೊಡ್ಮನಿ, ಏನ್.ಎಸ್.ಯು.ಐ ನ ಶಶಿಧರ್, ಮಹಿಳಾ ಕಾಂಗ್ರೆಸ್‌ನ ದ್ರಾಕ್ಷಾಯಣಮ್ಮ, ರಾಜೇಶ್ವರಿ, ಗೀತಾ, ವೀಣಾ ಕಿಸಾನ್ ಘಟಕದ, ಪ್ರವೀಣ್ ಕುಮಾರ್, ಮುಖಂಡರಾದ ಶಮಿ ದೇವರಹಟ್ಟಿ, ಸತೀಶ್ ಶ್ಯಾಗಲೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.