ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ಬೆಲೆ ಏರಿಕೆ: ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

Last Updated 7 ಆಗಸ್ಟ್ 2021, 0:56 IST
ಅಕ್ಷರ ಗಾತ್ರ

ದಾವಣಗೆರೆ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿಯ ಪೆಟ್ರೋಲ್ ಬಂಕ್‍ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ದುಸ್ತರವಾಗಿದೆ.ಜನರಿಗೆ ಸುಳ್ಳು ಹೇಳಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಮಾಡುತ್ತಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ ಜನಸಾಮಾನ್ಯರ ಮೇಲೆ ಕಾಳಜಿಯಿದ್ದರೆ ಇಂಧನ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ , ‘ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಯವರು ಅಪೌಷ್ಟಿಕ ಮಕ್ಕಳಿಗೆ ನೀಡುವ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ಮಾಡಿದ್ದಾರೆ. ಅಂತಹ ಭ್ರಷ್ಟರನ್ನು ಝೀರೋ ಟ್ರಾಫಿಕ್‍ನಲ್ಲಿ ಕರೆತಂದು ಸಚಿವರನ್ನು ಮಾಡುವ ಬಿಜೆಪಿಗೆ ಏನು ನೈತಿಕತೆ ಇದೆ’ ಎಂದು ವಾಗ್ದಾಳಿ ನಡೆಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್ ರಾವ್, ಮಹಾನಗರ ಪಾಲಿಕೆ ವಿರೋಧಪಕ್ಷದ ನಾಯಕ ಎ.ನಾಗರಾಜ್, ದಾಕ್ಷಾಯಣಮ್ಮ, ಟಿ.ಎಂ.ರಾಜೇಶ್ವರಿ, ನಾಗರತ್ನಮ್ಮ, ಸುಷ್ಮಾ ಪಾಟೀಲ್, ಕವಿತಾ ಚಂದ್ರಶೇಖರ್, ಆಶಾ ಮುರುಳಿ,ಸುನಿತಾ ಭೀಮಣ್ಣ, ಸುವರ್ಣಮ್ಮ, ಮಂಗಳಮ್ಮ, ಲಕ್ಷ್ಮೀದೇವಿ ಅಣ್ಣೇಶ್ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT