ಶುಕ್ರವಾರ, ಜೂನ್ 18, 2021
20 °C

ಪಿಎಫ್ಐ, ಎಸ್‌ಡಿಪಿಐ ನಿಷೇಧ ಕುರಿತು 20ರಂದು ನಿರ್ಧಾರ: ಅರಣ್ಯ ಸಚಿವ ಆನಂದ್‌ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಿಹರ: ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧ ಕುರಿತು ಆಗಸ್ಟ್ 20ರಂದು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದರು.

ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭಾನುವಾರ ಭೇಟಿ ನೀಡಿದ ವೇಳೆ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.

‘ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಘಟನೆಯನ್ನು ಖಂಡಿಸುತ್ತೇನೆ. ಯಾವ ಶಾಸಕರಿಗೂ ಆ ರೀತಿ ಆಗಬಾರದು. ಪ್ರಕರಣ ತನಿಖಾ ಹಂತದಲ್ಲಿ ಇದ್ದು, ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ’ ಎಂದು ಹೇಳಿದರು.

‘ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ಯಾರು ಚೆನ್ನಾಗಿ ಕೆಲಸ ಮಾಡಿದ್ದಾರೆ ಯಾರು ಮಾಡಿಲ್ಲ ಎಂಬುದಕ್ಕೆ ಅವರು ಅಂಕಗಳನ್ನು ಕೊಡುತ್ತಾರೆ. ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.  

ಅರಣ್ಯ ಇಲಾಖೆ ಭೂಮಿಯಲ್ಲಿ ಕೃಷಿ ನಡೆಸುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡುವುದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ‘ಪ್ರಕರಣ ಸುಪ್ರೀಂ‌ಕೋರ್ಟ್‌ನಲ್ಲಿದೆ. ನಾಲ್ಕು ತಿಂಗಳ ನಂತರ ಇತ್ಯರ್ಥವಾಗುವ ಸಾಧ್ಯತೆ ಇದೆ’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು