ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಮಿಶ್ರ ಬೆಳೆ ಬೆಳೆದು ಭೂಮಿಯ ಫಲವತ್ತತೆ ಹೆಚ್ಚಿಸಿ’

Published 8 ಜೂನ್ 2024, 15:40 IST
Last Updated 8 ಜೂನ್ 2024, 15:40 IST
ಅಕ್ಷರ ಗಾತ್ರ

ಚನ್ನಗಿರಿ: ‘ರೈತರು ಏಕರೂಪ ಬೆಳೆ ಬಿಟ್ಟು ಮಿಶ್ರ ಬೆಳೆಗಳನ್ನು ಬೆಳೆಯಬೇಕು. ಈ ಮೂಲಕ ಭೂಮಿಯ ಫಲವತ್ತತೆ ಹೆಚ್ಚಿಸಿ, ಉತ್ತಮ ಇಳುವರಿ ಪಡೆಯಬಹುದು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಸ್. ಅರುಣ್ ಕುಮಾರ್ ಸಲಹೆ ನೀಡಿದರು.

ಪಟ್ಟಣದ ಕೃಷಿ ಇಲಾಖೆಯಿಂದ ಕಸಬಾ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ಶನಿವಾರ ನಡೆದ ತೊಗರಿ ಕಿರು ಚೀಲ ವಿತರಣೆ, ಸುರಕ್ಷಿತ ಕೀಟನಾಶಕ ಬಳಕೆ ಹಾಗೂ ಬೀಜೋಪಚಾರ ಅಂದೋಲನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ದ್ವಿದಳ ಧಾನ್ಯಗಳಾದ ತೊಗರಿ, ಅಲಸಂದೆ, ಸೋಯಾಬಿನ್ ಮುಂತಾದ ಬೆಳೆಗಳನ್ನು ಮಿಶ್ರ ಬೆಳೆಗಳನ್ನಾಗಿ ಬೆಳೆದರೆ ಭೂಮಿಯ ಫಲವತ್ತತೆ ಹೆಚ್ಚುವುದಲ್ಲದೇ ರೈತರಿಗೆ ಪೌಷ್ಠಿಕ ಆಹಾರವೂ ಸಿಗುತ್ತದೆ. ರಸಗೊಬ್ಬರ ಮತ್ತು ಬಿತ್ತನೆ ಬೀಜ ದಾಸ್ತಾನು ಸಮರ್ಪಕವಾಗಿದ್ದು, ಯಾವುದೇ ಕೊರತೆ ಬಾರದಂತೆ ಎಚ್ಚರಿಕೆ ವಹಿಸಲಾಗಿದೆ. ರೈತರು ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಎನ್‌ಪಿಕೆ ಕಾಂಪ್ಲೆಕ್ಸ್ ರಸಗೊಬ್ಬರ ಬಳಸುವುದರಿಂದ ಬೆಳೆಗಳಿಗೆ ನೇರವಾಗಿ ಪೊಟ್ಯಾಶ್ ದೊರೆಯುತ್ತದೆ. ಇದರಿಂದ ಬೆಳೆಗಳ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದರು.

ಕೃಷಿ ಅಧಿಕಾರಿ ಮೆಹತಾಬ್ ಆಲಿ, ಆತ್ಮ ಯೋಜನೆ ತಾಂತ್ರಿಕ ವ್ಯವಸ್ಥಾಪಕ ಎಂ. ಪವನ್, ಕುಮಾರ್, ಸುಮಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT