ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ನೌಕರರು ಕರ್ತವ್ಯಕ್ಕೆ ಬರದಿದ್ದರೆ ಬದಲಿ ನೌಕರರ ನಿಯೋಜನೆ: ಜಿಪಂ ಸಿಇಒ

Last Updated 3 ಅಕ್ಟೋಬರ್ 2020, 13:26 IST
ಅಕ್ಷರ ಗಾತ್ರ

ದಾವಣಗೆರೆ: ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಉಪಕಾರ್ಯಕ್ರಮಗಳ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಬದಲಿ ನೌಕರರನ್ನು ನಿಯೋಜನೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಸಿಬ್ಬಂದಿ ಸೆ.24ರಿಂದ ಮುಷ್ಕರದಲ್ಲಿ ನಿರತರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-೧೯ ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡಲು ಇದರಿಂದ ಅಡಚಣೆ ಉಂಟಾಗಿದೆ.

ಅ.3ರಂದು ನಡೆದ ಸಭೆಯಲ್ಲಿ ದೀರ್ಘವಾಗಿ ಈ ಬಗ್ಗೆ ಚರ್ಚಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇವೆ ನೀಡುವಲ್ಲಿ ಅಸಡ್ಡೆತನ ತೋರಿರುವುದು ಕಂಡು ಬಂದಿದೆ. ಅ.5ರಂದು ಕರ್ತವ್ಯಕ್ಕೆ ಹಾಜರಾಗದವರನ್ನು ಕರ್ತವ್ಯದಿಂದ ವಜಾಗೊಳಿಸಲಾಗುವುದು. ಬದಲಿ ನೌಕರರನ್ನು ನಿಯೋಜಿಸಲು ಕ್ರಮ ವಹಿಸಲಾಗುವುದು ಎಂದು ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT