ದಾವಣಗೆರೆಯ ಕೆ.ಆರ್.ಮಾರ್ಕೆಟ್‌ನ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಂಗ್ರಹಿಸಿದ ಪ್ಲಾಸ್ಟಿಕ್ ಅನ್ನು ಮಹಾನಗರ ಪಾಲಿಕೆಯ ವಾಹನಕ್ಕೆ ನೀಡಲಾಯಿತು
ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದರಿಂದ ಅವರು ತಮ್ಮ ಮನೆಗಳಲ್ಲಿ ಕುಟುಂಬದ ಸದಸ್ಯರಿಗೂ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುತ್ತಾರೆ. ಈ ಅಭಿಯಾನದಲ್ಲಿ ವಿದ್ಯಾರ್ಥಿಗಳೇ ಪಾಲುದಾರರು
–ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ
ವಾರದಲ್ಲಿ 1 ಅಥವಾ 2 ದಿನ ಪಾಲಿಕೆಯ ವಾಹನಗಳು ಶಾಲೆಗಳಿಗೆ ತೆರಳಿ ಪ್ಲಾಸ್ಟಿಕ್ ಸಂಗ್ರಹಿಸುತ್ತವೆ. ಶಾಲೆಗಳಲ್ಲಿ ಪ್ಲಾಸ್ಟಿಕ್ ಸಂಗ್ರಹ ಹೆಚ್ಚಾದರೆ ಆ ಭಾಗದ ಆರೋಗ್ಯ ನಿರೀಕ್ಷಕರನ್ನು ಮುಖ್ಯ ಶಿಕ್ಷಕರು ಸಂಪರ್ಕಿಸಬಹುದು