ದಾವಣಗೆರೆ: ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ (ಎಫ್.ಟಿ.ಎಸ್.ಸಿ–1) ನ್ಯಾಯಾಲಯ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿದೆ.
ಹರಿಹರದ ಮಂಜುನಾಥ್ ಅಲಿಯಾಸ್ ಟಬ್ಬು ಮಂಜು 2021ರಲ್ಲಿ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಟೋದಲ್ಲಿ ಅಪಹರಿಸಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ. ಹಲವು ಬಾರಿ ಇದೇ ರೀತಿ ಕೃತ್ಯ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಳು.
ಈ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಸತೀಶ್ ಕುಮಾರ್ ಯು. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಾದ ವಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ (ಎಫ್.ಟಿ.ಎಸ್.ಸಿ–1) ನ್ಯಾಯಾಲಯದ ನ್ಯಾಯಾಧೀಶ ಶ್ರೀಪಾದ ಎನ್. ಅವರು ಅಪರಾಧಿಗೆ ಶಿಕ್ಷೆ ವಿಧಿಸಿದರು. ಸಂತ್ರಸ್ತೆಗೆ ಸರ್ಕಾರದಿಂದ ₹6 ಲಕ್ಷ ಪರಿಹಾರ ಹಣ ನೀಡಬೇಕು ಎಂದೂ ಆದೇಶಿಸಿದರು.
ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಸುನಂದಾ ಮಡಿವಾಳರ ವಾದ ಮಂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.