ದಾವಣಗೆರೆ: ಟ್ಯೂಷನ್‌ಗೆ ತೆರಳಿದ್ದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಶಿವಾಜಿನಗರದ ಗಣೇಶಪೇಟೆಯ ನಿವಾಸಿ ನಿತಿನ್‌ಕುಮಾರ್ ಜೈನ್ ನಗರದ ಬಾಡಿಗೆ ಮನೆಯೊಂದರಲ್ಲಿ ಸಂಜೆ 6ರಿಂದ 8 ಗಂಟೆವರೆಗೆ ಟ್ಯೂಷನ್ ಹೇಳಿಕೊಡುತ್ತಿದ್ದ. ಪಾಠ ಮುಗಿದ ಬಳಿಕ ನೋಟ್ಸ್ ಕೊಡುತ್ತೇನೆ ಎಂದು ಬಾಲಕನನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ’ ಎಂದು ದೂರು ದಾಖಲಾಗಿದೆ.
‘ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.