ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ: ಯುಗಾದಿ, ರಂಜಾನ್ ಸೌಹಾರ್ದದಿಂದ ಆಚರಿಸಲು ಸಲಹೆ

Published 7 ಏಪ್ರಿಲ್ 2024, 16:30 IST
Last Updated 7 ಏಪ್ರಿಲ್ 2024, 16:30 IST
ಅಕ್ಷರ ಗಾತ್ರ

ಚನ್ನಗಿರಿ:  ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಸಿಐ ಬಿ. ನಿರಂಜನ್ ತಿಳಿಸಿದರು.

ರಂಜಾನ್ ಹಾಗೂ ಯುಗಾದಿ ಹಬ್ಬದ ಅಂಗವಾಗಿ ಪಟ್ಟಣದ ಪೊಲೀಸ್ ಠಾಣೆ ಸಭಾಂಗಣದಲ್ಲಿ ಭಾನುವಾರ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹಿಂದೂಗಳಿಗೆ ಯುಗಾದಿ ಹಾಗೂ ಮುಸ್ಲಿಂ ಸಮುದಾಯದವರಿಗೆ ರಂಜಾನ್ ಪವಿತ್ರ ಹಬ್ಬಗಳಾಗಿವೆ. ಎರಡೂ ಹಬ್ಬಗಳನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ಕಿಡಿಗೇಡಿಗಳು ಹರಡುವ ವದಂತಿಗಳಿಗೆ ಕಿವಿಗೊಡದೇ ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸಬೇಕು ಎಂದರು.

ಮುಸ್ಲಿಂ ಸಮುದಾಯದ ಮುಖಂಡ ಅಮಾನುಲ್ಲಾ, ಡಿವೈಎಸ್‌ಪಿ ಪ್ರಶಾಂತ್ ಜಿ. ಮುನ್ನೋಳಿ, ಮುಖಂಡರಾದ ಖದೀರ್ ಬೇಗ್, ಮೊಹಮ್ಮದ್ ಫಾಜಿಲ್, ಆದಿಲ್ ಸಾಬ್, ವೆಂಕಟೇಶ್, ಕೆಂಚಪ್ಪ, ಅಮೀರ್ ಸಾಬ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT