ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ವಿವಿಧ ಹುದ್ದೆಗಳಿಗೆ ಪರೀಕ್ಷೆ ಬರೆದ 5,108 ಅಭ್ಯರ್ಥಿಗಳು

Published 25 ಫೆಬ್ರುವರಿ 2024, 15:37 IST
Last Updated 25 ಫೆಬ್ರುವರಿ 2024, 15:37 IST
ಅಕ್ಷರ ಗಾತ್ರ

ದಾವಣಗೆರೆ: ಪೊಲೀಸ್ ಕಾನ್‌ಸ್ಟೆಬಲ್‌ ಹಾಗೂ ಸೇವಾ ನಿರತ ಮತ್ತು ಬ್ಯಾಕ್ ಲಾಗ್ ಹುದ್ದೆಗಳಿಗೆ ಭಾನುವಾರ ಸುಗಮವಾಗಿ ಪರೀಕ್ಷೆ ನಡೆಯಿತು.

ನಗರದ 17 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತ ಪರೀಕ್ಷೆ ನಡೆಯಿತು. ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ ಪರೀಕ್ಷಾರ್ಥಿಗಳನ್ನು ತಪಾಸಣೆ ನಡೆಸಿ, ಪರೀಕ್ಷಾ ಕೇಂದ್ರದ ಒಳಗೆ ಬಿಡುತ್ತಿರುವ ದೃಶ್ಯ ಎಲ್ಲ ಕೇಂದ್ರಗಳಲ್ಲೂ ಸಾಮಾನ್ಯವಾಗಿತ್ತು.

ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆ, ವಸ್ತ್ರಸಂಹಿತೆ ಪಾಲನೆ ಹಾಗೂ ಇನ್ನಿತರ ನಿಯಮಗಳನ್ನು ಬಹಳ ಕಟ್ಟುನಿಟ್ಟಾಗಿ ಪಾಲಿಸಲಾಯಿತು.

ಒಟ್ಟು 8,240 ಪರೀಕ್ಷಾ ಅಭ್ಯರ್ಥಿಗಳಲ್ಲಿ 5,108 ಅಭ್ಯರ್ಥಿಗಳು ಹಾಜರಾಗಿದ್ದು, 3,132 ಅಭ್ಯರ್ಥಿಗಳು ಗೈರಾಗಿದ್ದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT