ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಐಆರ್ ಪೋರ್ಟಲ್‌ ಮೂಲಕ ಪತ್ತೆ: 130 ವಾರಸುದಾರರಿಗೆ ಮೊಬೈಲ್ ವಾಪಸ್

Published 27 ಅಕ್ಟೋಬರ್ 2023, 5:21 IST
Last Updated 27 ಅಕ್ಟೋಬರ್ 2023, 5:21 IST
ಅಕ್ಷರ ಗಾತ್ರ

ದಾವಣಗೆರೆ: ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ (ಸಿಇಐಆರ್) ಪೋರ್ಟಲ್ ಮೂಲಕ ಜಿಲ್ಲೆಯಲ್ಲಿ ಕಳೆದ ಮಾರ್ಚ್ ತಿಂಗಳಿಂದ ಇಲ್ಲಿಯವರೆಗೆ 3,290 ಮೊಬೈಲ್‌ಗಳನ್ನು ಬ್ಲಾಕ್ ಮಾಡಲಾಗಿದ್ದು, ಅವುಗಳಲ್ಲಿ 520 ಮೊಬೈಲ್‌ಗಳನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಯಾದ ₹ 20 ಲಕ್ಷ ಮೌಲ್ಯದ 130 ಮೊಬೈಲ್‌ಗಳನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಗುರುವಾರ ವಾರಸುದಾರರಿಗೆ ಹಿಂತಿರುಗಿಸಿ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಸಿಇಐಆರ್ ಪೋರ್ಟಲ್ ನಾಗರಿಕ ಸ್ನೇಹಿಯಾಗಿದ್ದು, ಮೊಬೈಲ್ ಕಳೆದುಕೊಂಡವರಿಗೆ ನೆರವಾಗುತ್ತದೆ. ಕಳ್ಳತನ, ಸುಲಿಗೆ ಅಥವಾ ಕಾಣೆಯಾದ ಮೊಬೈಲ್‌ಗಳನ್ನು ಬ್ಲಾಕ್ ಮಾಡಲು ಕೇಂದ್ರದ ದೂರಸಂಪರ್ಕ ಇಲಾಖೆಯಿಂದ ಜಾರಿಗೆ ತಂದಿರುವ ನೂತನ ವ್ಯವಸ್ಥೆ ಇದಾಗಿದ್ದು, ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡವರು ಈ ಪೋರ್ಟಲ್‌ನಲ್ಲಿ ಮಾಹಿತಿಯನ್ನು ನೋಂದಾಯಿಸಿ ಮೊಬೈಲ್ ಬ್ಲಾಕ್ ಮಾಡಿದ್ದು, ನಂತರ ಪೊಲೀಸರು ಪೋರ್ಟಲ್ ನೆರವಿನಿಂದ ಆ ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದಾರೆ. ಅವುಗಳಲ್ಲಿ ಕೆಲವು ಕೇರಳ ಇನ್ನಿತರ ಕಡೆಗಳಲ್ಲಿ ದೊರೆತಿವೆ’ ಎಂದು ಮಾಹಿತಿ ನೀಡಿದರು.

‘ಈ ಪೋರ್ಟಲ್ ಮೂಲಕ ರಾಜ್ಯದಲ್ಲಿ 1.52 ಲಕ್ಷ ಮೊಬೈಲ್‌ಗಳನ್ನು ಬ್ಲಾಕ್ ಮಾಡಿ ಅವುಗಳಲ್ಲಿ 40 ಸಾವಿರ ಪತ್ತೆಹಚ್ಚಲಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್ ಕಳವು, ಸುಲಿಗೆ ಅಥವಾ ಕಾಣೆಯಾಗಿದ್ದಲ್ಲಿ ಕೂಡಲೇ ನೂತನ ಸಿಇಐಆರ್ ವೆಬ್ ಪೋರ್ಟಲ್‌ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಪತ್ತೆಯಾದ ತಮ್ಮ ಮೊಬೈಲ್ ಫೋನ್‌ಗಳನ್ನು ವಾಪಸ್ ಪಡೆದವರಲ್ಲಿ ಕೆಲವರು ತಮ್ಮ ಅನಿಸಿಕೆ ಹಂಚಿಕೊಂಡರು. ತಮ್ಮ ಮೊಬೈಲ್ ಪತ್ತೆಗೆ ಪೋರ್ಟಲ್ ಹೇಗೆ ನೆರವಾಯಿತು ಎಂಬುದನ್ನು ವಿವರಿಸಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ. ಸಂತೋಷ್, ಸಿಇಎನ್ ಪೊಲೀಸ್ ಇನ್‌ಸ್ಪೆಕ್ಟರ್ ಪಿ. ಪ್ರಸಾದ್, ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಇನ್‌ಸ್ಪೆಕ್ಟರ್ ರುದ್ರಪ್ಪ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT