ಶನಿವಾರ, ಮೇ 15, 2021
24 °C

ಪೊಲೀಸ್ ಸ್ಟಿಕ್ಕರ್ ಅಂಟಿಸಿದ್ದ ಕಾರು ಅಪಘಾತ: ಒಬ್ಬರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಹೊಸ ಕುಂದವಾಡ ಸಮೀಪ ಹೋಟೆಲ್ ಸಮೀಪ ಕಾರು ಹಾಗೂ ದ್ವಿಚಕ್ರ ವಾಹನದ‌ ನಡುವೆ ಅಪಘಾತವಾಗಿದ್ದು, ಸವಾರರೊಬ್ಬರಿಗೆ ಗಾಯಗಳಾಗಿವೆ.

ಹೊಸ ಕುಂದವಾಡ ನಿವಾಸಿ ಎಲ್‌ಐಸಿ ಏಜೆಂಟ್ ರಮೇಶ (55) ಗಾಯಗೊಂಡವರು.  

‘ಅಪಘಾತವಾದ ಮೇಲೆ ಕಾರಿನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಬೇಕಿತ್ತು. ಆದರೆ ಅವರು ಓಡಿಹೋಗಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಗೊಂಡ ರಮೇಶ ಅವರನ್ನು 112 ತುರ್ತು ಸ್ಪಂದನ ವಾಹನದಲ್ಲಿ ಚಿಕಿತ್ಸೆಗಾಗಿ ಸಿ.ಜಿ. ಆಸ್ಪತ್ರೆಗೆ ಕಳುಹಿಸಲಾಯಿತು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.

‘ಅಪಘಾತವಾದ ಕಾರಿನಲ್ಲಿ ಪೊಲೀಸ್ ಎಂಬ ಸ್ಟಿಕ್ಕರ್ ಅಂಟಿಸಿದ್ದು, ಪೊಲೀಸರೇ ಅಪಘಾತ ಮಾಡಿದ್ದಾರೆ’ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದರು.

‘ವಾಹನ ಖಾಸಗಿಯದಾಗಿದ್ದು, ಪೊಲೀಸ್ ಸ್ಟಿಕ್ಕರ್ ಅಂಟಿಸಲಾಗಿದೆ. ಸಿಆರ್‌ಪಿಎಫ್‌ನವರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇದ್ದು, ಈ ಬಗ್ಗೆ ಪರಿಶೀಲಿಸಲಾಗುವುದು’ ಎಂದು  ಮೂಲಗಳು ತಿಳಿಸಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು