ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯವಾಗಿ ಹಿಂದುಳಿದ ಮರಾಠ ಸಮಾಜ: ಡಾ.ಎಂ.ಜಿ. ಮುಳೆ

ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿದ ಡಾ. ಎಂ.ಜಿ. ಮುಳೆ
Last Updated 15 ಆಗಸ್ಟ್ 2022, 2:56 IST
ಅಕ್ಷರ ಗಾತ್ರ

ದಾವಣಗೆರೆ: ‘ಕ್ಷತ್ರಿಯ ಮರಾಠರಾದ ನಾವು ಸಾಮಾಜಿಕವಾಗಿ ಉತ್ತಮ ಸ್ಥಾನಮಾನ ಹೊಂದಿದ್ದರೂ ರಾಜಕೀಯವಾಗಿ ಹಿಂದೆ ಬಿದ್ದಿದ್ದೇವೆ’ ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಎಂ.ಜಿ. ಮುಳೆ ಹೇಳಿದರು.

ಇಲ್ಲಿನ ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀಕೃಷ್ಣ ಭವಾನಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಜನಸಂಖ್ಯೆಯಲ್ಲಿ ಪ್ರಬಲರಾಗಿರುವ ನಾವು ಒಗ್ಗಟ್ಟು ಪ್ರದರ್ಶಿಸುವ ಮೂಲಕ ರಾಜಕೀಯ ಸ್ಥಾನ ಮಾನ ಪಡೆಯಬೇಕಿದೆ. ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಅದರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಇದರಿಂದಾಗಿ ನಮ್ಮ ಸಮಾಜದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಉತ್ತಮ ಅಂಕ ಗಳಿಸಿದ್ದರೂ ಉದ್ಯೋಗ ಸಿಗದ ಪರಿಸ್ಥಿತಿ ಎದುರಾಗಿದೆ’ ಎಂದು ತಿಳಿಸಿದರು.

ಕ್ಷತ್ರಿಯ ಮರಾಠ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ ಇದೆ. ಹೀಗಾಗಿಯೇ ರಾಜಕೀಯ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಯಾರೇ ಆಗಲಿ ಪಕ್ಷಕ್ಕಿಂತ ಸಮು
ದಾಯದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಳುಹಿಸಿದರೆ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ಹೇಳಿದರು.

‘ನಮ್ಮ ನಿಗಮದ ಸೌಲಭ್ಯ ಪಡೆಯಲು ಅರ್ಜಿಗಳೇ ಬರುತ್ತಿಲ್ಲ. ಕನಿಷ್ಠ 1 ಸಾವಿರ ಅರ್ಜಿಗಳು ಬಂದರೆ ನಮಗೆ ನೀಡಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬಹುದು. ಇಲ್ಲದಿದ್ದರೆ ಬಂದಿರುವ ಅನುದಾನವೂ ವಾಪಸ್ಸಾಗುತ್ತದೆ’ ಎಂದರು.

ಮರಾಠ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಪಾಲೋಚಿ , ಕ್ಷತ್ರಿಯ ಮರಾಠ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ಎಚ್. ಮರಿಯೋಜಿ ರಾವ್, ಮರಾಠ ವಿದ್ಯಾವರ್ಧಕ ಸಂಘದ ಜಿಲ್ಲಾಧ್ಯಕ್ಷ ಡಿ.ಮಾಲತೇಶ್ ರಾವ್ ಜಾಧವ್ , ಗೌರವಾಧ್ಯಕ್ಷ ಯಶವಂತರಾವ್ ಜಾಧವ್, ಅರವಿಂದ್ ಜಾಧವ್, ವಿಜಯೇಂದ್ರ ಜಾಧವ್, ಅಶಾ ಮರಿಯೋಜಿರಾವ್ , ಎನ್.ಎಸ್. ಕೃಷ್ಣರಾಜ ಸಾವಂತ, ಗೋಪಾಲರಾವ್ ಸಾವಂತ್, ಗೌರಬಾಯಿ ಮೋಹಿತೆ, ಅಕ್ಟೋಜಿರಾವ್ , ಸತೀಶ್ ರಾವ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT