ಭಾನುವಾರ, ಸೆಪ್ಟೆಂಬರ್ 19, 2021
26 °C

ವಿಶ್ವ ಜನಸಂಖ್ಯಾ ದಿನ ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿಟುವಳ್ಳಿಯ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ನಡೆದ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು, ಮೇಯರ್‌ ಶೋಭಾ ಪಲ್ಲಾಗಟ್ಟೆ ಚಾಲನೆ ನೀಡಿದರು

ದಾವಣಗೆರೆ: ಜನಸಂಖ್ಯಾ ಸ್ಥಿರತೆಯಿಂದ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜನಸಂಖ್ಯಾ ಸ್ಥಿರತೆ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು ಹೇಳಿದರು.

ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಾಲಿಕೆ, ತಾಲ್ಲೂಕು ಪಂಚಾಯಿತಿ, ನಿಟುವಳ್ಳಿ ನಗರ ಆರೋಗ್ಯ ಕೇಂದ್ರ, ನಿಟುವಳ್ಳಿ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ) ಆಶ್ರಯದಲ್ಲಿ ನಿಟುವಳ್ಳಿಯ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಡೆದ ಜನಜಾಗೃತಿ ಜಾಥಾಕ್ಕೆ ಮೇಯರ್‌ ಶೋಭಾ ಪಲ್ಲಾಗಟ್ಟೆ ಅವರ ಜತೆಗೆ ಚಾಲನೆ ನೀಡಿ ಮಾತನಾಡಿದರು.

‘ಮಿತ ಸಂಸಾರ- ಹಿತ ಸಂಸಾರ’, ‘ಹೆಣ್ಣಿರಲಿ– ಗಂಡಿರಲಿ ಮಗು ಒಂದೇ ಇರಲಿ’, ‘ಯೋಜಿತ ಪರಿವಾರ- ಸುಖ ಅಪಾರ’, ‘ಸಂಪೂರ್ಣ ಜವಾಬ್ದಾರಿಯಿಂದ ಕುಟುಂಬದ ವಿಕಾಸ’, ‘ಚಿಕ್ಕ ಕುಟುಂಬ- ಸಂಪೂರ್ಣ ಅಭಿವೃದ್ಧಿ’, ‘ಜನಸಂಖ್ಯೆ ನಿಯಂತ್ರಿಸಿ- ದೇಶದ ಅಭಿವೃದ್ಧಿಗೆ ಸಹಕರಿಸಿ’ ಎಂಬ ಘೋಷಣೆಗಳೊಂದಿಗೆ ಜಾಥಾ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ನಿಟುವಳ್ಳಿಯ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ(ಆರ್‌ಎಂಎಸ್‌ಎ) ಶಾಲಾ ವಿದ್ಯಾರ್ಥಿಗಳಿಗೆ ಜಾಮೆಟ್ರಿ ಬಾಕ್ಸ್‌ಗಳನ್ನು ವಿತರಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತ್ರಿಪುಲಾಂಭ, ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಾ , ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಂಗಾಧರ್, ಡಿಎಲ್‌ಒ ಡಾ. ಸರೋಜಾ ಬಾಯಿ, ಆರ್‌ಸಿಎಚ್‌ಒ ಡಾ. ಶಿವಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಡಿ ದುರ್ಗಪ್ಪ, ಟಿಎಚ್‌ಒ ಡಾ. ಮಂಜುನಾಥ್ ಪಾಟಿಲ್, ನಗರ ಆರೋಗ್ಯ ವೈದ್ಯಾಧಿಕಾರಿ ಡಾ. ವೆಂಕಟೇಶ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಕಾಧಿಕಾರಿ ಉಮಾಪತಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ರಾಚಪ್ಪ ಕುಪ್ಪಸ್ತ, ಕಿರಿಯ ಮತ್ತು ಆರೋಗ್ಯ ಸಹಾಯಕರು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯು ಶಾಲಾ ಮಕ್ಕಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜೂನ್ 27ರಿಂದ ಜುಲೈ 10ರವರೆಗೆ ದಂಪತಿ ಸಂಪರ್ಕ ಪಾಕ್ಷಿಕ ಆಚರಿಸಲಾಗಿದೆ. ಜು.11ರಿಂದ 24ರವರೆಗೆ ಜನಸಂಖ್ಯಾ ಸ್ಥಿರತೆಯ ಪಾಕ್ಷಿಕ ಆಚರಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು