ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಪ್ರಭಾ ಮಲ್ಲಿಕಾರ್ಜುನ್ ಮತಯಾಚನೆ

Published 25 ಮಾರ್ಚ್ 2024, 8:32 IST
Last Updated 25 ಮಾರ್ಚ್ 2024, 8:32 IST
ಅಕ್ಷರ ಗಾತ್ರ

ದಾವಣಗೆರೆ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಭಾನುವಾರ ನಗರದ ವಿವಿಧೆಡೆ ಮತಯಾಚನೆ ನಡೆಸಿದರು. 

ಬೆಳಿಗ್ಗೆ ಕುಂದವಾಡ ಕೆರೆಗೆ ಭೇಟಿ ನೀಡಿ ವಾಯುವಿಹಾರಿಗಳೊಂದಿಗೆ ಚರ್ಚೆ ನಡೆಸಿ, ‘ಕ್ಷೇತ್ರದ ಅಭಿವೃದ್ಧಿಗಾಗಿ ನನಗೆ ಒಮ್ಮೆ ಅವಕಾಶ ನೀಡಿ’ ಎಂದು ಮನವಿ ಮಾಡಿದರು.

ಎಸ್.ಎಸ್.ಲೇಔಟ್‌ನಲ್ಲಿರುವ ನೇತಾಜಿ ಸುಭಾಷ್ ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿಗಾಗಿ ತಾವು ರೂಪಿಸಿರುವ ಕಾರ್ಯಕ್ರಮಗಳಿಗೆ ಬೆಂಬಲವಾಗಿ ತಮಗೆ ಮತ ಚಲಾಯಿಸಬೇಕು ಎಂದು ವಿನಂತಿಸಿಕೊಂಡರು.

ಎಸ್.ಎಸ್.ಬಡಾವಣೆಯ ಕ್ಲಾಕ್ ಟವರ್ ಬಳಿ ಇರುವ ತರಕಾರಿ ಮಾರುಕಟ್ಟೆಗೆ ತೆರಳಿ ವ್ಯಾಪಾರಿಗಳು, ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಬೆಂಬಲ ನೀಡುವಂತೆ ಕೇಳಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT