ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತ: ವಡ್ನಾಳ್ ರಾಜಣ್ಣ

ಚನ್ನಗಿರಿ: ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಂದ ರೋಡ್ ಶೋ
Published 3 ಮೇ 2024, 5:20 IST
Last Updated 3 ಮೇ 2024, 5:20 IST
ಅಕ್ಷರ ಗಾತ್ರ

ಚನ್ನಗಿರಿ: ‘ಸರಳ, ಸೌಜನ್ಯ, ವಿನಯತೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವು ಖಚಿತವಾಗಿದ್ದು, ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಮನವಿ ಮಾಡಿದರು. 

ಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಡಾ. ಮಲ್ಲಿಕಾರ್ಜುನ್ ಅವರ ಪರ ನಡೆದ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ರಾಜ್ಯದ ಜನರಿಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರ ವಹಿಸಿಕೊಂಡ ಎರಡು ತಿಂಗಳಲ್ಲಿ ಈಡೇರಿಸುವ ಮೂಲಕ ಜನರ ಒಲವು ಗಳಿಸಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ಪ್ರಭಾ ಅವರು ಗೆಲವು ಸಾಧಿಸಿ ಪ್ರಥಮ ಬಾರಿಗೆ ಸಂಸದರಾಗಲಿದ್ದಾರೆ’ ಎಂದರು.

ಶಾಸಕ ಬಸವರಾಜು ವಿ. ಶಿವಗಂಗಾ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಬಹುಮತ ಪಡೆಯುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಮೂಲಸೌಕರ್ಯ, ನಗರಗಳ ಸಾಮರ್ಥ್ಯವರ್ಧನೆ ಹಾಗೂ ಸಾಮಾಜಿಕ ಸೇವೆಗಳ ನಡುವಿನ ಅಂತರ ನಿವಾರಣೆಗಾಗಿ ನಗರ ಪ್ರದೇಶದಲ್ಲೂ ಉದ್ಯೋಗ ಖಾತ್ರಿ ಜಾರಿಗೊಳಿಸಲಿದೆ’ ಎಂದರು.  

ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ‘ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಕನಸನ್ನು ಹೊಂದಿದ್ದೇನೆ. ಈ ಕನಸು ನನಸಾಗಲು ನನಗೆ ಹೆಚ್ಚಿನ ಮತಗಳನ್ನು ಹಾಕುವ ಮೂಲಕ ಗೆಲ್ಲಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಜನರು ಬದಲಾವಣೆಯನ್ನು ಬಯಸಿದ್ದಾರೆ ಎಂದರು. 

ತಾಲ್ಲೂಕು ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಹೊದಿಗೆರೆ ರಮೇಶ್, ವೀರೇಶ್ ನಾಯ್ಕ, ಸಿ. ನಾಗರಾಜ್, ಅಮಾನುಲ್ಲಾ, ಜಿ. ನಿಂಗಪ್ಪ, ಸೈಯದ್ ಗೌಸ್ ಪೀರ್, ಬಿ.ಆರ್. ಹಾಲೇಶ್, ಎಂ. ಯೋಗೇಶ್, ವಡ್ನಾಳ್ ಜಗದೀಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT