ದಾವಣಗೆರೆ: ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿದ ಭಾಷಣ ಮಾಡಿದ್ದು ಸರಿಯಲ್ಲ. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯಿಸಿದರು.

‘ಮಹಿಳಾ ಮೀಸಲಾತಿ ಮಸೂದೆಗೆ ಸಾಂವಿಧಾನಿಕ ತಿದ್ದುಪಡಿ ತರುವ ಪ್ರಯತ್ನ ವಿಫಲವಾಗಿದ್ದನ್ನು ನೆಪವಾಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನಡೆದುಕೊಂಡ ರೀತಿ ಅನುಮಾನಾಸ್ಪದವಾಗಿದೆ. ಭಾಷಣದ ಮೂಲಕ ಮಹಿಳಾ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ ಅವರು, ವಿರೋಧ ಪಕ್ಷಗಳನ್ನು ತೆಗಳಿದ್ದಾರೆ. ಈ ಕುರಿತು ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘11 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಹಿಳಾ ಮೀಸಲು ಮಸೂದೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. 2023ರಲ್ಲಿ ಲೋಕಸಭೆಯಲ್ಲಿ ಅನುಮೋದನೆ ಪಡೆದ ಮಸೂದೆಯನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಜಾರಿಗೊಳಿಸುವ ಅವಕಾಶವನ್ನು ಕೈಚೆಲ್ಲಿದೆ. ಹಲವು ರಾಜ್ಯಗಳಿಗೆ ಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಮಸೂದೆ ಮಂಡಿಸಿ ರಾಜಕಾರಣ ಮಾಡಿದೆ’ ಎಂದು ಅಸಮಾಧಾನ ಹೊರಹಾಕಿದರು.

‘ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿಲ್ಲ. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಸ್ಥಳೀಯ ಸಂಸ್ಥೆಯಲ್ಲಿ ಶೇ 50 ಮೀಸಲಾತಿ ಅನುಷ್ಠಾನಗೊಳಿಸಲಾಗಿದೆ. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಕೂಡ ಮಹಿಳಾ ಮೀಸಲಾತಿ ಜಾರಿಗೆ ಯುಪಿಎ ಸರ್ಕಾರ ಸಾಕಷ್ಟು ಪ್ರಯತ್ನಿಸಿತ್ತು. ಮಹಿಳಾ ಮತದಾರರನ್ನು ವೋಟ್ಬ್ಯಾಂಕ್ ಮಾಡಿಕೊಂಡ ಬಿಜೆಪಿ, ಭಾವನಾತ್ಮಕವಾಗಿ ಆಟವಾಡುತ್ತಿದೆ’ ಎಂದು ಹರಿಹಾಯ್ದರು.

‘ಮಹಿಳಾ ಮೀಸಲು ಮಸೂದೆಯನ್ನು ಜಾರಿಗೆ ತರುವ ಬದ್ಧತೆ ಕೇಂದ್ರ ಸರ್ಕಾರಕ್ಕೆ ಇದ್ದಿದ್ದರೆ ಸರ್ವ ಪಕ್ಷಗಳ ಸಭೆ ಕರೆದು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡಬೇಕಿತ್ತು. ಮಹಿಳಾ ಮೀಸಲು ಮಸೂದೆಯನ್ನು ಜಾರಿಗೆ ತರಲು ಬಿಜೆಪಿಗೆ ಇನ್ನೂ ಎರಡು ವರ್ಷ ಕಾಲಾವಕಾಶವಿದೆ. ಬಿಜೆಪಿಯ ರಾಜಕೀಯ ಹುನ್ನಾರವನ್ನು ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜಿ. ಶಿವಕುಮಾರ್, ಅಯೂಬ್ ಪೈಲ್ವಾನ್, ಎ. ನಾಗರಾಜ್ ಹಾಜರಿದ್ದರು.

ರಾಜಕೀಯ ಲಾಭಕ್ಕೆ ಕ್ಷೇತ್ರ ಪುನರ್ ವಿಂಗಡಣೆ...

‘ರಾಜಕೀಯ ಲಾಭಕ್ಕಾಗಿ ಕ್ಷೇತ್ರ ಪುನರ್ ವಿಂಗಡಣೆಗೆ ಕೇಂದ್ರ ಸರ್ಕಾರ ಉತ್ಸುಕತೆ ತೋರುತ್ತಿದೆ. ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ಇದಕ್ಕೆ ನಿದರ್ಶನ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದರು.

‘ಜನಸಂಖ್ಯೆ ಆಧಾರದ ಮೇರೆಗೆ ಕ್ಷೇತ್ರ ಪುನರ್ ವಿಂಗಡಣೆ ಮಾಡಿದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಸಂಖ್ಯೆ ನಿಯಂತ್ರಣ ಮಾಡಿದ ದಕ್ಷಿಣದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ ಕುಗ್ಗಲಿದೆ. ವಿರೋಧ ಪಕ್ಷಗಳಿಗೆ ಸರಿಯಾದ ಮಾಹಿತಿ ನೀಡದ ಕೇಂದ್ರ ಸರ್ಕಾರ, ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ’ ಎಂದು ದೂರಿದರು.

‘ಮಹಿಳಾ ಮೀಸಲು ಮಸೂದೆಯನ್ನು ಕ್ಷೇತ್ರ ಪುನರ್ ವಿಂಗಡಣೆ ಜೊತೆಗೆ ತಳುಕು ಹಾಕಿ ವಂಚಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡಿತ್ತು. ಈ ಕಾರಣಕ್ಕೆ ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸಿದವು. ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಹೆಚ್ಚು ಆತಂಕವಿದೆ’ ಎಂದರು.

ಶಿವಶಂಕರಪ್ಪ ಬಿಜೆಪಿ ಬೆಂಬಲಿಸಿರಲಿಲ್ಲ...

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಶಿವಮೊಗ್ಗದಲ್ಲಿ ನಡೆದ ಮಹಾಸಭಾದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯವನ್ನು ಶ್ಲಾಘಿಸಿದ್ದರೇ ಹೊರತು ಬಿಜೆಪಿ ಬೆಂಬಲಿಸುವಂತೆ ಕರೆನೀಡಿರಲಿಲ್ಲ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

‘ಕಾಂಗ್ರೆಸ್ಗೆ ಸಿದ್ಧಾಂತ, ನೈತಿಕತೆ ಇದೆ. ಉಪಚುನಾವಣೆಯ ಹಿನ್ನೆಲೆಯಲ್ಲಿ ಕೆಲ ಮುಖಂಡರ ವಿರುದ್ಧ ಕೆಪಿಸಿಸಿ, ಎಐಸಿಸಿ ಕೈಗೊಂಡ ತೀರ್ಮಾನ ಶಿಸ್ತುಬದ್ಧ ಪಕ್ಷ ಎಂಬುದನ್ನು ನಿರೂಪಿಸಿದೆ. ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.