ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 'ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್ ಮಾಸ್ಟರ್ ಮೈಂಡ್ ಇ–ಪೇಪರ್' ಲೋಕಾರ್ಪಣೆ

ವಿದ್ಯಾರ್ಥಿಗಳ ನೆರವಿಗೆ ಸಿದ್ಧ: ಮಾಡಾಳ್
Last Updated 30 ಡಿಸೆಂಬರ್ 2021, 5:34 IST
ಅಕ್ಷರ ಗಾತ್ರ

ಚನ್ನಗಿರಿ: ‘ದೇಶದ ಭಾವಿ ಪ್ರಜೆಗಳಾಗಿರುವ ವಿದ್ಯಾರ್ಥಿಗಳ ಮುಂದಿನ ಉತ್ತಮ ಭವಿಷ್ಯವನ್ನು ರೂಪಿಸಲು ಯಾವುದೇ ಸಹಾಯವನ್ನು ಮಾಡಲು ನಾನು ಸದಾ ಸಿದ್ಧ. ಪ್ರಥಮ ದರ್ಜೆ ಕಾಲೇಜಿನ 500 ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ‘ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್‌ ಮಾಸ್ಟರ್ ಮೈಂಡ್ ಇ-ಪೇಪರ್’ ಸಹಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಎಷ್ಟೇ ವಿದ್ಯಾರ್ಥಿಗಳಿದ್ದರೂ ಅವರಿಗೂ ಈ ಸೌಲಭ್ಯವನ್ನು ವಿಸ್ತರಣೆ ಮಾಡಲಾಗುವುದು’ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ಪಟ್ಟಣದ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮ ಹಾಗೂ ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’ ಸಹಯೋಗದಲ್ಲಿ ಬುಧವಾರ ನಡೆದ ‘ಮಾಸ್ಟರ್ ಮೈಂಡ್ ಇ-ಪೇಪರ್’ ಅನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ವಾರಕ್ಕೆ ಐದು ದಿನ ಇ–ಪೇಪರ್ ಇರಲಿದ್ದು, ಇದರಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ವಿದ್ಯಾರ್ಥಿಗಳ ಬೇಕಾದ ತರಬೇತಿ, ಕೋಚಿಂಗ್, ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿವರವಾದ ಮಾಹಿತಿ, ತಜ್ಞರಿಂದ ಪರೀಕ್ಷೆಗಳಿಗೆ ಸಂಬಂಧಪಟ್ಟಂತೆ ತರಬೇತಿಯನ್ನು ನೀಡುತ್ತಿರುವುದು ಸ್ವಾಗತಾರ್ಹ. ‘ಪ್ರಜಾವಾಣಿ’ ಪತ್ರಿಕೆ ನಂಬಿಕೆಗೆ ಅರ್ಹವಾದ ಪತ್ರಿಕೆ ಎಂದು ರಾಜ್ಯದಲ್ಲಿ ಹೆಸರು ಪಡೆದುಕೊಂಡಿದೆ. ಈ ಪತ್ರಿಕೆ ಕೇವಲ ಸಾರ್ವಜನಿಕರಿಗೆ ಅಗತ್ಯವಾದ ಸುದ್ದಿಗಳನ್ನು ಮಾತ್ರ ನೀಡದೇ ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನು ರೂಪಿಸಲು ಇ–ಪೇಪರ್ ತಂದಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಉನ್ನತ ಸ್ಥಾನಕ್ಕೆ ಏರಬೇಕು ಎಂದು ಸಲಹೆ ನೀಡಿದರು.

‘ಮೊದಲು ವಿದ್ಯಾರ್ಥಿಗಳಲ್ಲಿ ನಾನು ಕಲಿಯಬೇಕು ಎಂಬ ಆಸಕ್ತಿ ಇರುವುದು ಮುಖ್ಯ. ತಂದೆ–ತಾಯಿಗಳು ಕೂಲಿ ನಾಲಿ ಮಾಡಿ ವಿದ್ಯಾಭ್ಯಾಸ ಕಲಿಯಿರಿ ಎಂದು ಕಾಲೇಜಿಗೆ ಸೇರಿಸುತ್ತಾರೆ. ಅವರ ಕನಸನ್ನು ನನಸು ಮಾಡುವುದು ನಿಮ್ಮ ಗುರಿಯಾಗಿರಬೇಕು. ವಿದ್ಯಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆ, ಗುರಿ ಹಾಗೂ ನೈತಿಕತೆ ಇರಬೇಕು. ವಿದ್ಯಾರ್ಥಿಗಳ ಅನೂಕೂಲಕ್ಕಾಗಿ ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳಿಗೆ ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಿಸುವುದು ನನ್ನ ಕರ್ತವ್ಯ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಸಿ.ಬಿ. ಹಾಲಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್,‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ದ್’ ಪ್ರಸರಣ ವಿಭಾಗದ ಪ್ರಧಾನ ವ್ಯವಸ್ಥಾಪಕ ಅಲಿವರ್ ಲೆಸ್ಲಿ, ದಾವಣಗೆರೆ ಬ್ಯೂರೊ ಮುಖ್ಯಸ್ಥ ವಿಶಾಖ ಎನ್., ಮಾಸ್ಟರ್ ಮೈಂಡ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಂ.ವಿ. ಸುರೇಶ್, ದಾವಣಗೆರೆ ಪ್ರಸರಣ ವಿಭಾಗದ ಎಸ್‌. ಪ್ರಕಾಶ್‌, ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಅಬ್ದುಲ್ ರೆಹಮಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT