ದಾವಣಗೆರೆ: ‘ವಿಶ್ವದಾದ್ಯಂತ ಇಂಧನದ ಬಿಕ್ಕಟ್ಟು ಶುರುವಾಗಿದೆ. ಜಾಗತಿಕ ಸ್ಥಿತಿ ಗತಿ ಆಧಾರದ ಮೇರೆಗೆ ಕಂಪನಿಗಳು ಎಲ್ಪಿಜಿ ಬೆಲೆ ಏರಿಕೆ ಮಾಡಿವೆ. ಯುದ್ಧ ಕೊನೆಗೊಂಡ ಬಳಿಕ ಮತ್ತೆ ಬೆಲೆ ಇಳಿಕೆ ಆಗಲಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

‘ಭಾರತಕ್ಕೆ ಅಗತ್ಯ ಇರುವ ಶೇ 50ರಷ್ಟು ಇಂಧನ ವಿದೇಶದಿಂದ ಆಮದು ಆಗುತ್ತದೆ. ಹೊರ್ಮುಜ್ ಜಲಸಂಧಿಯ ಮೂಲಕ ಇಂಧನ ಭಾರತಕ್ಕೆ ಬರುತ್ತದೆ. ಜಲಸಂಧಿಯಲ್ಲಿ ತೊಂದರೆ ಆಗಿರುವುದರಿಂದ ಇಂಧನ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ. ಶೀಘ್ರದಲ್ಲೇ ಇದು ಬಗೆಹರಿಯುವ ವಿಶ್ವಾಸವಿದೆ’ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಜಗತ್ತಿನ ಅನಕೇ ದೇಶಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಿಗುತ್ತಿಲ್ಲ. ಪಾಕಿಸ್ತಾನ ಸೇರಿ ಹಲವು ದರಿದ್ರ ದೇಶಗಳಲ್ಲಿ ಜನಜೀವನ ಅಸ್ತವ್ಯಸ್ತ ಆಗಿದೆ. ಭಾರತದಲ್ಲಿ ಇಂತಹ ಸ್ಥಿತಿ ಇಲ್ಲ. ನೈಸರ್ಗಿಕ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ಗೆ ತೊಂದರೆ ಆಗಿಲ್ಲ’ ಎಂದರು.

‘2004ರಿಂದ 2014ರವರೆಗೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇಂಧನ ಬೆಲೆ ಏರಿಕೆ ಮಾಡುವ ಅಧಿಕಾರವನ್ನು ಕಂಪನಿಗಳಿಗೆ ನೀಡಿದೆ. ಈ ಅಧಿಕಾರ ಬಳಕೆ ಮಾಡಿಕೊಂಡು ಕಂಪನಿಗಳು ನಿರ್ಧಾರ ಕೈಗೊಳ್ಳುತ್ತಿವೆ. ಆದರೂ, ಗೃಹಬಳಕೆ ಎಲ್ಪಿಜಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಆಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಮಿತಿ ಮೀರಿದ ಭ್ರಷ್ಟಾಚಾರ: ‘ರಾಜ್ಯದಲ್ಲಿ ಅಧಿಕಾರ ಹಂಚಿಕೆ ಗೊಂದಲದಿಂದ ಭ್ರಷ್ಟಾಚಾರ ಮಿತಿ ಮೀರಿದೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಸರ್ಕಾರಿ ನೌಕರರಿಗೆ ವೇತನ ನೀಡಲು ಕೂಡ ಸರ್ಕಾರದ ಖಜಾನೆಯಲ್ಳಿ ಹಣ ಇಲ್ಲ’ ಎಂದು ಕುಟುಕಿದರು.

‘ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬಗ್ಗೆ ಹೈಕಮಾಂಡ್ ಚರ್ಚೆ ಆರಂಭಿಸಿದೆ. ಕಾಂಗ್ರೆಸ್ ಯಾರನ್ನೇ ಮುಖ್ಯಮಂತ್ರಿ ಮಾಡುವ ನಿರ್ಧಾರ ಕೈಗೊಂಡರೂ ಅದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ. ಅದು ನಮಗೆ ಸಂಬಂಧಿಸಿದ ವಿಷಯವೂ ಅಲ್ಲ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗೃಹಸಚಿವ ಜಿ.ಪರಮೇಶ್ವರ ಹೆಸರು ಮುನ್ನಲೆಗೆ ತಂದು ಗೊಂದಲ ಸೃಷ್ಟಿಸಲಾಗಿದೆ. ಕಾಂಗ್ರೆಸ್ನಲ್ಲಿ ಗೊಂದಲ ಮನೆ ಮಾಡಿದೆ’ ಎಂದು ದೂರಿದರು.

ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು...

‘ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ’ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.

‘ಪಂಚರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಉತ್ತಮ ಫಲಿತಾಂಶ ಸಿಗುವ ವಿಶ್ವಾಸ ಮೂಡಿದೆ. ಕೇರಳದಲ್ಲಿ ಕೂಡ ನಿರೀಕ್ಷೆ ಮೀರಿದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಮಾತ್ರ ದೇಶದಲ್ಲಿ ನೆಲೆ ಕಳೆದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಒಂದು ಸ್ಥಾನವೂ ದಕ್ಕುವುದಿಲ್ಲ’ ಎಂದು ವಾಗ್ದಾಳಿ ನಡೆಸಿದರು.

ಪೊಲೀಸ್, ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ: ‘ಮಾದಕವಸ್ತು ಜಾಲದಲ್ಲಿ ಸಿಲುಕಿದ ಆರೋಪಿಗಳಿಂದಲೂ ಪೊಲೀಸರು ಹಣ ವಸೂಲಿ ಮಾಡುತ್ತಿದ್ದಾರೆ. ಹುಬ್ಬಳ್ಳಿ ಮಾದಕವಸ್ತು ಜಾಲದಲ್ಲಿ ಸಿಲುಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು ಮಾದಕವಸ್ತು ಸೇವನೆ ಮಾಡಿದವರ ಬಳಿ ಹಣ ವಸೂಲಿ ಮಾಡಿದ್ದಾರೆ. ಪೊಲೀಸ್ ಹಾಗೂ ಕಂದಾಯ ಸೇರಿ ಎಲ್ಲ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.