ದಾವಣಗೆರೆ: ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿದ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಜೂನ್ 1ರಿಂದ ರಾಜ್ಯದ ಎಲ್ಲ ಶಾಲೆ ಹಾಗೂ ಕಾಲೇಜುಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲು ತೀರ್ಮಾನಿಸಿದ್ದೇವೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದರು.
.ಗೋಮಾಂಸ ರಫ್ತು ತಡೆಯಲು ಕೇಂದ್ರಕ್ಕೆ ಆಗ್ರಹ: ಪ್ರಮೋದ್ ಮುತಾಲಿಕ್ .
‘ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ವಿರೋಧ ಕಟ್ಟಿಕೊಂಡಿರುವ ಕಾಂಗ್ರೆಸ್, ಓಲೈಕೆ ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಸಮುದಾಯದ ಮನ ಗೆಲ್ಲುವ ಉದ್ದೇಶದಿಂದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆ–ಕಾಲೇಜಿಗೆ ಬರಲು ಅವಕಾಶ ಕಲ್ಪಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಂಪೂರ್ಣ ವಿರೋಧವಿದೆ’ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ವಿದ್ಯಾರ್ಥಿಗಳಲ್ಲಿ ಭೇದ–ಭಾವ ಉಂಟಾಗಬಾರದು ಎಂಬ ಕಾರಣಕ್ಕೆ ಸಮವಸ್ತ್ರ ನೀತಿಯನ್ನು ಸರ್ಕಾರ ರೂಪಿಸಿದೆ. ಹಿಜಾಬ್ ಧರಿಸುವುದು ಸಮವಸ್ತ್ರ ನೀತಿಗೆ ವಿರುದ್ಧವಾಗಿದೆ. ಶಾಲೆ–ಕಾಲೇಜು ಪ್ರವೇಶದ್ವಾರದವರೆಗೆ ಹಿಜಾಬ್ ಹಾಕಿಕೊಳ್ಳಲು ಯಾರ ವಿರೋಧವೂ ಇಲ್ಲ. ಆದರೆ, ಶಿಕ್ಷಣ ಸಂಸ್ಥೆಯ ಒಳಗೆ ಹಿಜಾಬ್ ಧರಿಸಿದರೆ ಧರ್ಮವನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ. ಈ ತಾರತಮ್ಯ ಏಕೆ’ ಎಂದು ಪ್ರಶ್ನಿಸಿದರು.
.ಹುಬ್ಬಳ್ಳಿ| ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಯಾಗಲಿ: ಪ್ರಮೋದ ಮುತಾಲಿಕ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.