ಸೋಮವಾರ, ಜನವರಿ 17, 2022
18 °C

ಸ್ಥಳೀಯ ಅಭ್ಯರ್ಥಿಗೆ ಆದ್ಯತೆ ನೀಡಿ: ಜಿ.ಎಂ.ಸಿದ್ದೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಲೇಬೆನ್ನೂರು: ಶಿವಮೊಗ್ಗ– ದಾವಣಗೆರೆ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಆಭ್ಯರ್ಥಿ ಗೆಲುವು ನಿಶ್ಚಿತ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.

ಸಮೀಪದ ಕೋಮಾರನಹಳ್ಳಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ಹಿಂದೆ ಬೇರೆ ಭಾಗದಿಂದ ಬಂದು ಆಯ್ಕೆಯಾಗಿದ್ದ ಜನಪ್ರತಿನಿಧಿಗಳು ಚುನಾವಣೆ ನಂತರ ಜನರ ಕೈಗೆ ಸಿಕ್ಕಿರಲಿಲ್ಲ. ಬಿಜೆಪಿ ಕಾರ್ಯಕರ್ತರು ಚುನಾವಣೆ ಮುಗಿಯುವವರೆಗೆ ಯಾವುದೇ ಗೊಂದಲಕ್ಕೆ ಒಳಗಾಗಬೇಡಿ’ ಎಂದು ಕಿವಿಮಾತು ಹೇಳಿದರು.

ಈ ಬಾರಿ ಬಿಜೆಪಿ ಆಭ್ಯರ್ಥಿ ಸ್ಥಳೀಯರಾಗಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮದ ಆಧಾರದಲ್ಲಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಆಭ್ಯರ್ಥಿ ಕೆ.ಎಸ್. ನವೀನ್ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನಗವಾಡಿ ವೀರೇಶ್, ಮುಖಂಡರಾದ ಬಿ.ಪಿ. ಹರೀಶ್, ಗ್ರಾಮಾಂತರ ಘಟಕದ ಅಧ್ಯಕ್ಷ ಲಿಂಗರಾಜ್, ಬಿ.ಎಂ.ವಾಗೀಶ ಸ್ವಾಮಿ, ಜಿಗಳಿ ಹನುಮಗೌಡ, ಆದಾಪುರ ವೀರೇಶ, ಹಾಲಿವಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗನಾಥ್, ಐರಣಿ ಅಣ್ಣೇಶ್, ಬಿಜೆಪಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸದಸ್ಯರು ಇದ್ದರು.

ಬಳಿಕ ಸಮೀಪದ ಕೊಕ್ಕನೂರು ಗ್ರಾಮದಲ್ಲಿ ಮುಖಂಡರು ಪ್ರಚಾರ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು