ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ನಿರ್ವಹಣೆಗೆ ಸನ್ನದ್ಧರಾಗಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಸೂಚನೆ
Published 22 ನವೆಂಬರ್ 2023, 5:03 IST
Last Updated 22 ನವೆಂಬರ್ 2023, 5:03 IST
ಅಕ್ಷರ ಗಾತ್ರ

ಜಗಳೂರು: ಬರ ನಿರ್ಹವಣೆಗೆ ಅಧಿಕಾರಿಗಳು ಸನ್ನದ್ಧರಾಗಿ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ 2023-24ನೇ ಸಾಲಿನ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬರ ಆವರಿಸಿದ್ದು, ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ವಿದ್ಯುತ್ ಪೂರೈಕೆ ಸೇರಿದಂತೆ ರೈತರಿಗೆ ಯಾವುದೇ ತೊಂದರೆಯಾಗದಂತೆ ಗಮನ ಹರಿಸಬೇಕು ಎಂದರು.

ಸರ್ಕಾರದ ನಿರೀಕ್ಷೆಗಿಂತ ಕಡಿಮೆ ಮಾನವ ದಿನಗಳು ಕೆಲಸ ನಡೆದಿರುವ ಗುರುಸಿದ್ದಾಪುರ, ಬಿಸ್ತುವಳ್ಳಿ, ಬಿಳಿಚೋಡು, ಬಿದರಕೆರೆ, ದೇವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಿಸಿ ರಸ್ತೆ ಹಾಗೂ ಇತರೆ ಕಾಮಗಾರಿಗಳನ್ನು ಆರಂಭಿಸಿ ಎಂದು ಪಿಡಿಒಗಳಿಗೆ ತಾಕೀತು ಮಾಡಿದರು.

ವಿದ್ಯಾರ್ಥಿಗಳನ್ನು ವಸತಿನಿಲಯದಿಂದ ವಂಚಿತರನ್ನಾಗಿ ಮಾಡಬೇಡಿ. ಬಾಡಿಗೆ ಕಟ್ಟಡದಲ್ಲಾಗಲೀ ಹೆಚ್ಚುವರಿ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಬೇಕು ಎಂದು ಸಲಹೆ‌ ನೀಡಿದರು.

‘ಹನುಮಂತಾಪುರ ಸೇರಿದಂತೆ ವಿವಿಧೆಡೆ ನೀರಿನ ಹಾಹಾಕಾರ ಹೆಚ್ಚುತ್ತಿದ್ದು, ಪಿಡಿಒಗಳು ಜನರ ಕೈಗೆ ಸಿಗುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಕೇಂದ್ರ ಸ್ಥಾನದಲ್ಲಿದ್ದು ಸಮಸ್ಯೆಗಳಿಗೆ ಸ್ಪಂದಿಸಬೇಕು. ನಿರ್ಲಕ್ಷ್ಯ ವಹಿಸಿದರೆ ನಿಮ್ಮ‌ ರಕ್ಷಣೆಗೆ ಯಾರೂ ಬರುವುದಿಲ್ಲ’ ಎಂದು ಶಾಸಕ ಬಿ.ದೇವೇಂದ್ರಪ್ಪ ಅವರು ಪಿಡಿಒಗಳಿಗೆ ಎಚ್ಚರಿಸಿದರು.

ನರೇಗಾದಂಡಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಿಸುವ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರದಿಂದ ಈವರೆಗೆ ಅನುಮೋದನೆ ದೊರೆತಿಲ್ಲ ಎಂದು ತಾ.ಪಂ ಯೋಜನಾಧಿಕಾರಿ ಚಂದ್ರಶೇಖರ್ ತಿಳಿಸಿದರು.

ವಾಡಿಕೆಗಿಂತ 361 ಮಿ.ಮೀ ಕಡಿಮೆ ಮಳೆಯಾಗಿದೆ‌. ಮಳೆ ಕೊರತೆಯಿಂದ ಮುಂಗಾರು ಬೆಳೆ ಶೇ 70ರಿಂದ 80ರಷ್ಟು ಇಳುವರಿ ಕಡಿಮೆಯಾಗಿದೆ‌. ಶೇ 80ರಿಂದ 90ರಷ್ಟು ನಷ್ಟ ಸಂಭವಿಸಿರುವ ಬೆಳೆಗಳಿಗೆ ಒಟ್ಟು ಪ್ರತಿ ಎಕರೆಗೆ ₹13,000ದವರೆಗೆ ಪರಿಹಾರ ನೀಡಲಾಗುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಾಹಿತಿ ನೀಡಿದರು. 

ಜಿಲ್ಲಾಧಿಕಾರಿ ಡಾ.ವೆಂಕಟೇಶ್, ಜಿ.ಪಂ. ಸಿಇಒ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಲೊಕೇಶ್, ಉಪವಿಭಾಗ ಅಧಿಕಾರಿ ದುರ್ಗಶ್ರೀ, ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ, ತಹಶೀಲ್ದಾರ್ ಸಯ್ಯದ್ ಕಲೀಂಉಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Quote - ಕೇಂದ್ರದ ಎನ್‌ಡಿಆರ್‌ಎಫ್ ಬರ ಅಧ್ಯಯನ ತಂಡಕ್ಕೆ ₹250 ಕೋಟಿ ಬರ ಪರಿಹಾರ ನೀಡುವಂತೆ ವರದಿ ರವಾನಿಸಲಾಗಿದೆ. ಆದರೆ ಇದುವರೆಗೂ ಹಣ ಬಿಡುಗಡೆಯಾಗಿಲ್ಲ. ಈ ಬಗ್ಗೆ ರೈತರು ಸಂಸದರನ್ನು ಪ್ರಶ್ನಿಸಿಬೇಕು ಎಸ್.ಎಸ್.ಮಲ್ಲಿಕಾರ್ಜುನ್ ಸಚಿವ

Cut-off box - ಕೊಳವೆಬಾವಿ ನೀರು ಪೂರೈಕೆಗೆ ಒಪ್ಪಂದ ತಾಲ್ಲೂಕಿನ ಬಿಸ್ತುವಳ್ಳಿ ತಮಲೇಹಳ್ಳಿ ಸಂತೆಮುದ್ದಾಪುರದಲ್ಲಿ 22 ಖಾಸಗಿ ಬೋರ್‌ವೆಲ್ ಮಾಲೀಕರೊಂದಿಗೆ ನೀರು ಪೂರೈಕೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಕುಡಿಯುವ ನೀರಿನ ಮತ್ತು ನೈರ್ಮಲ್ಯ ಇಲಾಖೆ ಎಇಇ ಸಾಧಿಕ್ ಉಲ್ಲಾ ಮಾಹಿತಿ ನೀಡಿದರು.  ಈವರೆಗೆ ತುರ್ತು ನೀರು ಪೂರೈಕೆಗಾಗಿ 500 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದೆ‌. ಜಲಜೀವನ್ ಮಿಷನ್ ಯೋಜನೆಯಡಿ 22 ಗ್ರಾಮಗಳಲ್ಲಿ ಮನೆಗಳಿಗೆ ನೀರು ಪೂರೈಕೆ ಮಾಡಲಾಗಿದೆ. ಬಹುಗ್ರಾಮ‌ ಕುಡಿಯುವ ಯೋಜನೆಯಡಿ ₹482 ಕೋಟಿ ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಅನುಮೋದನೆ ಹಂತದಲ್ಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT