ದಾವಣಗೆರೆ: ದ್ವೀತಿಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಜೂನ್ 18ರಂದು ನಡೆಯಲ್ಲಿದ್ದು, ಜಿಲ್ಲೆಯಾದ್ಯಂತ 16,018 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 31 ಪರೀಕ್ಷಾ ಕೇಂದ್ರಗಳನ್ನು ಹಾಗೂ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ 15 ಬ್ಲಾಕ್‌ಗಳನ್ನು ನಿಗದಿಪಡಿಸಲಾಗಿದೆ.

ವಿದ್ಯಾರ್ಥಿಗಳ ಕ್ಷೇಮಕ್ಕಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾಡಳಿತದಿಂದ ಸ್ಯಾನಿಟೇಷನ್ ಮಾಡಲಾಗಿದೆ. ಅಂತರ ಕಾಯ್ದುಕೊಳ್ಳಲು ಒಂದು ಮೀಟರ್ ಅಂತರದಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗದೆಂಬ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳಿಂದ 14 ಮಾರ್ಗಗಳಲ್ಲಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

‘ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಸ್ವಚ್ಛತೆಗಾಗಿ ಸೋಪು ನೀರಿನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಗುಂಪು ಗುಂಪಾಗಿ ಒಳಗೆ ಬಾರದೇ ಅಂತರ ಕಾಯ್ದುಕೊಂಡು ಒಳಗೆ ಹೋಗಲು ಬಾಕ್ಸ್‌ಗಳನ್ನು ಹಾಕಿ ಒಬ್ಬೊಬ್ಬರಾಗಿ ಪರೀಕ್ಷಾ ಕೊಠಡಿಗೆ ಹೋಗುವ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದು ಪದವಿಪೂರ್ವ ಶಿಕ್ಷಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.