ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ‘ಪತ್ರಿಕಾ ಭವನ ಶೀಘ್ರ ಹಸ್ತಾಂತರ’

Last Updated 2 ಜುಲೈ 2022, 4:01 IST
ಅಕ್ಷರ ಗಾತ್ರ

ದಾವಣಗೆರೆ: ಮಹಾನಗರ ಪಾಲಿಕೆಯ ಆವರಣದಲ್ಲಿರುವ ಪತ್ರಿಕಾ ಭವನವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಶೀಘ್ರ ಹಸ್ತಾಂತರಿಸಲಾಗುವುದು ಎಂದು ಮೇಯರ್ ಜಯಮ್ಮ ಗೋಪಿ ನಾಯ್ಕ ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಲ್ಲಿನ ಲಕ್ಷ್ಮೀ ವೃತ್ತದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಹರ್ಡೇಕರ್ ಮಂಜಪ್ಪ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಹಿಂದೆ ನಗರಸಭೆ ಇದ್ದ ವೇಳೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈಗಿನ ಪಾಲಿಕೆ ಆವರಣದಲ್ಲಿ ಪತ್ರಿಕಾ ಭವನ ನೀಡಲಾಗಿತ್ತು. ಬಳಿಕ ಆ ಭವನವನ್ನು ಬೇರೆ ಸಂಘದವರು ಪಡೆದಿದ್ದು, ಇನ್ನೊಂದು ವಾರದಲ್ಲಿ ಆ ಭವನವನ್ನು ಪಡೆದು ಪತ್ರಕರ್ತರ ಸಂಘಕ್ಕೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.

‘ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಪತ್ರಿಕೆಗಳು ಬಹಳ ಪ್ರಮುಖ ಪಾತ್ರ ವಹಿಸಿವೆ. ಪತ್ರಕರ್ತರು ಕೆಲ ವೇಳೆ ಜೀವವನ್ನು ಪಣಕ್ಕಿಟ್ಟು ಸುದ್ದಿ ಮಾಡುವ ಸಂದರ್ಭಗಳನ್ನು ನೋಡಿದ್ದೇವೆ. ಸತ್ಯಾಸತ್ಯತೆ ಅರಿತು ವಸ್ತುನಿಷ್ಠ ವರದಿ ಮಾಡಬೇಕು’ ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ಮಾತನಾಡಿದರು.

ಉಪ ಮೇಯರ್ ಗಾಯತ್ರಿಬಾಯಿ ಖಂಡೋಜಿರಾವ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಉದಯಕುಮಾರ, ಪಾಲಿಕೆ ಸದಸ್ಯ ಎಲ್.ಡಿ. ಗೋಣಪ್ಪ, ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಕೆ.ಎಸ್. ಗೋವಿಂದರಾಜ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಮಾಜಿ ಅಧ್ಯಕ್ಷ ಬಸವರಾಜ ದೊಡ್ಡಮನಿ, ಪತ್ರಕರ್ತರಾದ ಕೊಟ್ರೇಶ ಅಣಬೂರು ಮಠ, ಎ.ಫಕೃದ್ದೀನ್, ಎನ್.ವಿ. ಬದರೀನಾಥ, ಇಂದೂಧರ ನಿಷಾನಿಮಠ, ಚನ್ನಬಸವ ಶೀಲವಂತ, ವಸಂತಕುಮಾರ, ಸಿ. ವೇದಮೂರ್ತಿ, ರುದ್ರಮ್ಮ, ಚಂದ್ರಶೇಖರ್, ನಿಂಗೋಜಿರಾವ್, ಶಾಂಭವಿ, ಜೈಮುನಿ, ಆಂಜನೇಯ, ವಿವೇಕ, ರಫೀಕ್, ಸತೀಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT