‘ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿ ಇತರ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಈ ಕೇಂದ್ರವನ್ನು ದಾವಣಗೆರೆಯಲ್ಲಿ ತೆರೆಯಲಾಗಿದೆ. ಅಂದು ಬೆಳಿಗ್ಗೆ 11ಕ್ಕೆ ಪೂಜಾ ಕೈಂಕರ್ಯದ ಮೂಲಕ ತರಬೇತಿ ಕೇಂದ್ರ ಕಾರ್ಯಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳಿಗೆ ಈಗಾಗಲೇ ಪ್ರವೇಶಾವಕಾಶ ಕಲ್ಪಿಸಲಾಗಿದೆ’ ಎಂದು ವಿನಯ್‌ಕುಮಾರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.