ದಾವಣಗೆರೆ: ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದಿಂದ ಸೆಪ್ಟೆಂಬರ್ 4ರಂದು ಬೆಳಿಗ್ಗೆ 10.30ಕ್ಕೆ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ‘ಪತ್ರಿಕಾ ವಿತರಕರ ದಿನಾಚರಣೆ ಹಾಗೂ ವಿತರಕರಿಗೆ ಸನ್ಮಾನ ಸಮಾರಂಭ’ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಜೆ. ವತನ್ ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಮೇಯರ್ ವಿನಾಯಕ ಪೈಲ್ವಾನ್, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಏಕಾಂತಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಂಜುನಾಥ ಎ., ಸಹಾಯಕ ವಾರ್ತಾಧಿಕಾರಿ ಧನಂಜಯ, ‘ಪ್ರಜಾವಾಣಿ’ ಬ್ಯೂರೊ ಮುಖ್ಯಸ್ಥ ಸಿದ್ದಯ್ಯ ಹಿರೇಮಠ, ಪತ್ರಕರ್ತರಾದ ಎಂ.ಎಸ್.ವಿಕಾಸ್, ನವೀನ್ ಎಂ.ಜಿ., ಸದಾನಂದ ಹೆಗಡೆ, ನಾಗರಾಜ್ ಬಡದಾಳ್, ಮಂಜುನಾಥ ಗೌರವಳಕ್ಕ, ಬಿ.ಎನ್.ಮಲ್ಲೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
‘ಪತ್ರಿಕಾ ವಿತರಕರು ಸಂಕಷ್ಟದಲ್ಲಿದ್ದು, ಸರ್ಕಾರ, ಸ್ಥಳೀಯ ಆಡಳಿತಗಳು ನೆರವು ನೀಡಬೇಕು. ವಿತರಕರಿಗೆ ಜಾಗದ ವ್ಯವಸ್ಥೆ, ವಿಮೆಯ ಸೌಲಭ್ಯ, ಸಾಲದ ರೂಪದಲ್ಲಿ ವಾಹನ ವ್ಯವಸ್ಥೆ, ಪಿಂಚಣಿ, ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಬೇಕು’ ಎಂದು ಅವರು ಒತ್ತಾಯಿಸಿದರು.
ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಚಂದ್ರು, ಉಪಾಧ್ಯಕ್ಷ ಕುಮಾರಸ್ವಾಮಿ, ಖಜಾಂಚಿ ಅರುಣ್‌ಕುಮಾರ್ ಕೆ., ಪ್ರಮುಖರಾದ ಬಸವರಾಜ್ ಎಂ.ಬಿ., ನಂದಕುಮಾರ್ ಎ., ಟಿ.ಪಿ.ನಾಗರಾಜ, ನಾಗೇಂದ್ರ, ಸುಧಾಕರ್, ರಘುರಾಮ್, ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.