ಜಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ ಎಂದು ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್ ಹೇಳಿದರು.

‘ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಉತ್ತಮ ಅವಕಾಶವಿದೆ. ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಒತ್ತಡ ಹೆಚ್ಚಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿದಲ್ಲಿ, ನನ್ನ ಸಂಪೂರ್ಣ ಬೆಂಬಲ ಹಾಗೂ ಸ್ವಾಗತವಿದೆ’ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಬಯಸಿ ನಾನು ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರೂ ಸಂತೋಷದಿಂದ ಸ್ವಾಗತಿಸಬಹುದು ಎಂಬ ವಿಶ್ವಾಸವಿದೆ. ಈ ಹಿಂದೆ ಸೋನಿಯಾಗಾಂಧಿ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಇತಿಹಾಸವಿದೆ. ಅಂದು ಬಳ್ಳಾರಿ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಈಗ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವುದರಿಂದ ರಾಹುಲ್ ಗಾಂಧಿ ಅವರಿಗೆ ಹೆಚ್ಚಿನ ಬಹುಮತ ದೊರೆಯುವ ವಿಶ್ವಾಸವಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.