ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಳಗಳ ಒತ್ತುವರಿ ತಡೆಯಿರಿ

ಅಧಿಕಾರಿಗಳಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ
Last Updated 20 ಮಾರ್ಚ್ 2022, 6:13 IST
ಅಕ್ಷರ ಗಾತ್ರ

ಹೊನ್ನಾಳಿ: ‘ಕಂದಾಯ ಇಲಾಖೆಗೆ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಮುಗ್ಧ ಜನರಿಂದ ಹಣ ಕೀಳುವ ಮಧ್ಯವರ್ತಿಗಳನ್ನು ದೂರವಿಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ತಾಲ್ಲೂಕಿನ ಅರಬಗಟ್ಟೆ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಶನಿವಾರ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮಗಳಲ್ಲಿನ ಗೋಮಾಳವನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿರುವವರನ್ನು ಸಾಗುವಳಿ ಮಾಡದಂತೆ ತಡೆಯಬೇಕು. ಒತ್ತುವರಿ ತೆರವುಗೊಳಿಸಬೇಕು ಎಂದು ತಹಶೀಲ್ದಾರ್‌ಗೆ ಸೂಚಿಸಿದರು.

‘ಅರಬಗಟ್ಟೆ ಗ್ರಾಮದಲ್ಲಿ ಆಶ್ರಯ ಬಡಾವಣೆಗೆ ಮೀಸಲಿರಿಸಿರುವ ಭೂಮಿಯನ್ನು ಒತ್ತುವರಿದಾರರಿಂದ ಬಿಡಿಸಲಾಗುವುದು. ನಿವೇಶನ ರಹಿತರನ್ನು ಗುರುತಿಸಿ ನಿವೇಶನ ವಿತರಿಸಲಾಗುವುದು’ ಎಂದರು.

ಅಧಿಕಾರಿಗಳು ಸಮಸ್ಯೆ ಹೇಳಿದರೆ ಸ್ಪಂದಿಸುವುದಿಲ್ಲ ಎಂದು ಗ್ರಾಮಸ್ಥರು ದೂರಿದಾಗ ಶಾಸಕರು, ‘ನನ್ನಗಮನಕ್ಕೆ ತನ್ನಿ’ ಎಂದು ಹೇಳಿದರು.

ಕೋವಿಡ್‌ನಿಂದ ಮೃತಪಟ್ಟವರ 22 ಕುಟುಂಬಗಳಲ್ಲಿ ಎರಡು ಕುಟುಂಬಗಳಿಗೆ ತಲಾ ₹ 1ಲಕ್ಷ ಹಾಗೂ ಉಳಿದ 20 ಕುಟುಂಬಗಳಿಗೆ ತಲಾ ₹ 50 ಸಾವಿರ ಪರಿಹಾರಧನದ ಚೆಕ್ ವಿತರಿಸಿದರು. ವಿವಿಧ ಸೌಲಭ್ಯಗಳ ಪ್ರಮಾಣಪತ್ರಗಳನ್ನು ವಿತರಿಸಿದರು. ಅರಬಗಟ್ಟೆ ಗ್ರಾಮದ ಬಗರ್‌ಹುಕುಂ ಸಾಗುವಳಿದಾರರಿಗೆ ಶೀಘ್ರ ಹಕ್ಕುಪತ್ರ ವಿತರಿಸಲಾಗುವುದು ಎಂದು ತಹಶೀಲ್ದಾರ್‌ ರಶ್ಮಿ ಹೇಳಿದರು.

ಉಪವಿಭಾಗಾಧಿಕಾರಿ ಹುಲ್ಮನಿ ತಿಮ್ಮಣ್ಣ,ತಾ.ಪಂ. ಇಒ ರಾಮಾಭೋವಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಡಿ.ಕೆ.ಅನಿತಾ, ಉಪಾಧ್ಯಕ್ಷೆ ರೇಣುಕಮ್ಮ, ಸದಸ್ಯರಾದ ಸುಭಾಷ್, ಸುರೇಶ್, ಮಲ್ಲೇಶ್, ಜಯಮ್ಮ, ಹಳದಮ್ಮ, ಕರಿಯಮ್ಮ ಚಂದ್ರಮ್ಮ, ಮಂಜುನಾಥ್, ಶ್ರೀನಾಥ್, ಕೃಷಿ ಉಪ ನಿರ್ದೇಶಕಿ ಹಂಸವೇಣಿ, ಸಹಾಯಕ ಕೃಷಿ ನಿರ್ದೇಶಕ ಸಿ.ಟಿ. ಸುರೇಶ್, ಆರೋಗ್ಯಾಧಿಕಾರಿ ಡಾ.ಕೆಂಚಪ್ಪ, ಬಿಇಒ ರಾಜೀವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT