ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಕಳ್ಳ ಸಾಗಣೆ ತಡೆಗೆ ಕಣ್ಣು, ಕಿವಿಯಾಗಿ ಕಾರ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ

Published 1 ಆಗಸ್ಟ್ 2023, 6:04 IST
Last Updated 1 ಆಗಸ್ಟ್ 2023, 6:04 IST
ಅಕ್ಷರ ಗಾತ್ರ

ದಾವಣಗೆರೆ: ಮಹಿಳೆಯರು ಮತ್ತು ಮಕ್ಕಳ ಕಳ್ಳ ಸಾಗಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸಲಹೆ ನೀಡಿದರು.

ಜಿಲ್ಲಾಡಳಿತದಿಂದ ಸೋಮವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಮಾನವ ಕಳ್ಳ ಸಾಗಾಣಿಕೆ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿದ್ದು, ಮಹಿಳೆಯರು, ಮಕ್ಕಳು ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಇದು ರಾಜ್ಯ, ರಾಷ್ಟ್ರದ ಸಮಸ್ಯೆಯಾಗಿರದೇ ವಿಶ್ವದ ಸಮಸ್ಯೆಯಾಗಿದೆ. ಆದ್ದರಿಂದ  ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಸರ್ಕಾರದಡಿ ಅನೇಕ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಸ್ವಾಧಾರ ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಗಾವಲು ಸಮಿತಿಯನ್ನು ರಚಿಸಲಾಗಿದೆ.

‘ಸರ್ಕಾರದೊಂದಿಗೆ ಸಮಾಜದ ಪ್ರತಿಯೊಬ್ಬ ನಾಗರಿಕ ಹಾಗೂ ಸರ್ಕಾರಿ ಇಲಾಖೆಗಳು ಕೈಜೋಡಿಸಿ ಕ್ರಿಯಾಶೀಲತೆಯಿಂದ ಕೆಲಸ ಮಾಡಿದರೆ ಮಾತ್ರ ಇದನ್ನು ನಿಯಂತ್ರಿಸಬಹುದು’ ಎಂದು ಹೇಳಿದರು.

‘ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಕಳೆದು ಹೋದ ಬಾಲಕ ಬಾಲಕಿಯರಲ್ಲಿ 21,187 ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಲೀಸ್ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ರಕ್ಷಿಸಲಾಗಿದೆ. ಆದ್ದರಿಂದ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸಂವಿಧಾನದಲ್ಲಿ ಹಲವು ಕಾನೂನುಗಳಿದ್ದು, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಅವಕಾಶವಿದೆ, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್.ಎಂ. ಕರೆಣ್ಣವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮಾನಾಯ್ಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‍ಕುಮಾರ್, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT