ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳಿಂದ ಬಾಲ್ಯ ವಿವಾಹಕ್ಕೆ ತಡೆ

Last Updated 3 ಫೆಬ್ರುವರಿ 2020, 15:37 IST
ಅಕ್ಷರ ಗಾತ್ರ

d ಹರಿಹರ ತಾಲೂಕಿನ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯ ವಿವಾಹವನ್ನು ತಡೆ ಹಿಡಿಲಾಗಿದೆ.

ಹೊನ್ನಾಳಿ ತಾಲ್ಲೂಕಿನ ವಡ್ಡರಹಟ್ಟಿಯ ಗ್ರಾಮದ ಯುವಕನೊಂದಿಗೆ ಮಂಗಳವಾರ ಮದುವೆ ನಡೆಸಲು ಸಿದ್ಧತೆ ನಡೆದಿತ್ತು.

ಸಹಾಯವಾಣಿಗೆ ದೂರು ಬಂದ ಹಿನ್ನೆಲೆಯಲ್ಲಿ ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡದ ಸದಸ್ಯರಾದ ಸ್ವಾಮಿ.ಬಿ. ಹರ್ಷದ್ ಅಲಿ.ಟಿ.ಎ. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜ್ಯೋತಿ.ಎಸ್.ಎಸ್., ಹಾಗೂ ಮಲೆಬೆನ್ನೂರು ಠಾಣೆಯ ಹೆಡ್‌ ಕಾನ್ಸ್‌ಟೆಬಲ್ ಸತೀಶ್ ಕುಮಾರ್ ಅವರು ಗ್ರಾಮದ ಮುಖಂಡರಾದ ಭೀಮಣ್ಣ, ಹನುಮಂತಪ್ಪ ಹಾಗು ಈರಣ್ಣ ಅವರ ನೇತೃತ್ವದಲ್ಲಿ ಪೋಷಕರ ಮನೆಗೆ ಭೇಟಿ ನೀಡಿ ಅವರ ಮನವೊಲಿಸಿದರು.

‘ಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸಿ ಪೋಷಕರಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿಯಿತು’ ಎಂದು ಮಕ್ಕಳ ಸಹಾಯವಾಣಿ ಸಂಯೋಜಕ ಕೊಟ್ರೇಶ್.ಟಿ.ಎಂ. ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT