ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿನಿಯರಿಗೆ ಕಲುಷಿತ ಆಹಾರ ಪೂರೈಕೆ: ಪ್ರಾಂಶುಪಾಲ, ವಾರ್ಡನ್ ಅಮಾನತು

ಕಿತ್ತೂರು ಚೆನ್ನಮ್ಮ ವಸತಿ ಶಾಲೆಯ ಕೆಲವು ವಿದ್ಯಾರ್ಥಿನಿಯರು ಗುಣಮುಖ
Published 28 ನವೆಂಬರ್ 2023, 13:48 IST
Last Updated 28 ನವೆಂಬರ್ 2023, 13:48 IST
ಅಕ್ಷರ ಗಾತ್ರ

ಸಂತೇಬೆನ್ನೂರು: ಸಮೀಪದ ಕಾಕನೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಕಲುಷಿತ ಆಹಾರ ಪೂರೈಸಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪ್ರಾಂಶುಪಾಲ ಮಂಜುನಾಥ್ ಪುರದ್ ಹಾಗೂ ನಿಲಯ ಪಾಲಕಿ ನಸೀಮಾ ಬಾನು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಆದೇಶಿಸಿದ್ದಾರೆ.

ತಾಲ್ಲೂಕಿನ ಮಾವಿನಹೊಳೆ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಗುರುಮೂರ್ತಪ್ಪ ಅವರನ್ನು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನಿಲಯ ಪಾಲಕರಾಗಿ ಅದೇ ಶಾಲೆಯ ಸ್ಟಾಫ್ ನರ್ಸ್ ಆರ್. ಅನಿತಾ ಅವರಿಗೆ ಹೆಚ್ಚುವರಿ ಹೊಣೆ ವಹಿಸಿ ಆದೇಶಿಸಲಾಗಿದೆ. 

ಶಾಲೆಯಲ್ಲಿ ಸೋಮವಾರ ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ 9 ವಿದ್ಯಾರ್ಥಿನಿಯರು ಮಂಗಳವಾರ ಗುಣಮುಖರಾಗಿದ್ದಾರೆ. 

25 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಈ ಪೈಕಿ 12 ವಿದ್ಯಾರ್ಥಿನಿಯರನ್ನು ದಾವಣಗೆರೆಯ ಚಿಗಟೇರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿತ್ತು. ಅವರಲ್ಲಿ 9 ವಿದ್ಯಾರ್ಥಿನಿಯರು ಗುಣಮುಖರಾಗಿದ್ದು, ಮೂವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಉಳಿದವರೂ ಶೀಘ್ರ ಗುಣಮುಖರಾಗಲಿದ್ದಾರೆ ಎಂದು ಡಿಎಚ್‌ಒ ಷಣ್ಮುಖಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT