ಧರ್ಮಪುರ: ‘ಬೇಸಿಗೆ ದಿನವಾಗಿರುವುದರಿಂದ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಲಾಗುವುದು. ಸಾರ್ವಜನಿಕರು ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.

ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚರಂಡಿ ಮತ್ತು ಬೂದು ನೀರು ಸಂಸ್ಕರಣ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಅಂಬೇಡ್ಕರ್ ವೃತ್ತದಿಂದ ಚರಂಡಿ ಮತ್ತು ಬೂದು ನೀರು ಸಂಸ್ಕರಣ ಘಟಕ ನಿರ್ಮಾಣಕ್ಕೆ ₹1 ಕೋಟಿ 40 ಲಕ್ಷ ಅನುದಾನ ನೀಡಲಾಗಿದೆ. ಇಲ್ಲಿನ ಗ್ರಾಮ ಪಂಚಾಯಿತಿಗೆ ನೂತನ ಕೊಠಡಿ ನಿರ್ಮಾಣಕ್ಕೆ ₹1.60 ಕೋಟಿ, ಸಾಮೂಹಿಕ ಶೌಚಾಲಯ ನಿರ್ಮಾಣಕ್ಕೆ ₹30 ಲಕ್ಷ ಅನುದಾನ ನೀಡಲಾಗಿದ್ದು, ಪಂಚಾಯಿತಿಯವರು ಇದರ ಸದುಪಯೋಗ ಪಡೆಯಬೇಕು’ ಎಂದರು.

ಧರ್ಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೂರ್ ಜಾನ್, ಉಪಾಧ್ಯಕ್ಷೆ ಮಂಜುಳಮ್ಮ, ಎಸ್.ಆರ್.ತಿಪ್ಪೇಸ್ವಾಮಿ, ಕೆಡಿಪಿ ಸದಸ್ಯ ತಿಮ್ಮಯ್ಯ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ, ಲಕ್ಷ್ಮಿದೇವಿ, ಅಸ್ಲಾಂ ಖಾನ್, ರಾಘವೇಂದ್ರ, ನಾಗರತ್ನಮ್ಮ, ಶಬೀನಾ, ಮಧು, ಕೃಷ್ಣ, ಗೌಡಪ್ಪ, ಮೂರ್ತಿ, ಅಮಾನುಲ್ಲಾ, ಜ್ಯೋತಿ, ಹನುಮಂತರಾಯ, ಬಂಡೀಗೌಡ, ಚಂದ್ರು, ಎಂಜಿನಿಯರ್ ಡಿ.ಎಂ.ಗುರುದೇವ್, ಶಿವಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.