ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳೂರು | ಮರಕ್ಕೆ ಶಾಲಾ ಬಸ್ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ತೀವ್ರ ಗಾಯ

Last Updated 7 ಜನವರಿ 2023, 12:57 IST
ಅಕ್ಷರ ಗಾತ್ರ

ಜಗಳೂರು: ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಒಟ್ಟು 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ರಸ್ತೆಮಾಚಿಕೆರೆ ಸಮೀಪ ಶನಿವಾರ ಸಂಭವಿಸಿದೆ.

ಪಟ್ಟಣದ ಎನ್.ಎಂ.ಕೆ. ಶಾಲೆಯ ಬಸ್ ದೇವಿಕೆರೆ ಗ್ರಾಮಕ್ಕೆ ತೆರಳುತಿದ್ದ ವೇಳೆ ರಸ್ತೆಮಾಚಿಕೆರೆ–ಬಗ್ಗೇನಹಳ್ಳಿ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ.

ಗಾಯಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಗಳೂರು ಪೊಲೀಸ್ ಠಾಣೆಯ ಸಿಪಿಐ ಶ್ರೀನಿವಾಸ ಹಾಗೂ ಎಸ್ಐ ಸಾಗರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT