ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆಗೆ ನಾಳೆ ಪ್ರಿಯಾಂಕ ಗಾಂಧಿ

Published 3 ಮೇ 2024, 5:16 IST
Last Updated 3 ಮೇ 2024, 5:16 IST
ಅಕ್ಷರ ಗಾತ್ರ

ದಾವಣಗೆರೆ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೇ. 4ರಂದು ದಾವಣಗೆರೆಗೆ ಆಗಮಿಸಲಿದ್ದು, ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಪ್ರಚಾರ ನಡೆಸಲಿದ್ದಾರೆ.

ಅಂದು ಮ.2ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸುದ್ದಿಗಾರರಿಗೆ ತಿಳಿಸಿದರು.

ಚರ್ಚೆಗೆ ನಾನು ರೆಡಿ

ದಾವಣಗೆರೆ ಅಭಿವೃದ್ಧಿಪಡಿಸಿದ್ದು, ಯಾರು ಎಂಬುದು ದಾವಣಗೆರೆ ಜನರಿಗೆ ಗೊತ್ತು. ಆದರೆ ಈ ಬಗ್ಗೆ ಚರ್ಚಿಸಲು ನಾನು ತಯಾರಿದ್ದೇನೆ ಎಂದು ಮಲ್ಲಿಕಾರ್ಜುನ್ ಸಿದ್ದೇಶ್ವರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

‘ಕೆಲಸಕ್ಕೆ ಸರ್ಕಾರದ ಆದೇಶ, ಟೆಂಡರ್ ಹಾಗೂ ಕಾರ್ಯಾದೇಶ ಯಾವಾಗ ಆಯಿತು ಎಂಬುದು ನನಗೆ ಗೊತ್ತಿದೆ. ಅದರಲ್ಲಿ ಎಷ್ಟು ಹಣ ಲೂಟಿ ಹೊಡೆದಿದ್ದು ನನಗೆ ತಿಳಿದಿದೆ’ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT