ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ ವಿ.ವಿ ಕುಲಪತಿಯಾಗಿ ಪ್ರೊ. ಬಿ.ಡಿ. ಕುಂಬಾರ ನೇಮಕ

Last Updated 11 ಜುಲೈ 2022, 14:52 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಬಸವಂತಪ್ಪ ದೊಡ್ಡಮಲ್ಲಪ್ಪ ಕುಂಬಾರ ಅವರನ್ನು ರಾಜ್ಯಪಾಲರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕುಲಪತಿ ಆಗಿದ್ದ ಪ್ರೊ. ಶರಣಪ್ಪ ವೈಜಿನಾಥ್‌ ಹಲಸೆ ಅವರು ಮಾರ್ಚ್‌ನಲ್ಲಿ ನಿವೃತ್ತರಾಗಿದ್ದರು. ಬಳಿಕ ಪ್ರೊ. ಲಕ್ಷ್ಮಣ ಪಿ. ಅವರನ್ನು ಹಂಗಾಮಿ ಕುಲಪತಿಯನ್ನಾಗಿ ನೇಮಿಸಲಾಗಿತ್ತು. ಇದೀಗ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತರಾಗಿದ್ದ ಪ್ರೊ. ಬಸವಂತಪ್ಪ ದೊಡ್ಡಮಲ್ಲಪ್ಪ ಕುಂಬಾರ ಅವರನ್ನು ಕುಲಪತಿಯಾಗಿ ನೇಮಕ ಮಾಡಲಾಗಿದೆ.

ಕುಲಸಚಿವರಾಗಿ ಡಾ. ಕೆ. ಶಿವಶಂಕರ್‌: ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ (ಮೌಲ್ಯಮಾಪನ) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಬಿಎ ಸ್ನಾತಕೋತ್ತರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೆ.ಶಿವಶಂಕರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈವರೆಗೆ ಕುಲಸಚಿವರಾಗಿದ್ದ ಡಾ. ಎಚ್‌.ಎಸ್‌. ಅನಿತಾ ಅವರು ತಮ್ಮ ಮಾತೃ ಸಂಸ್ಥೆ ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗಕ್ಕೆ ಹಿಂತಿರುಗುವಂತೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT