ದಾವಣಗೆರೆ: ಇಲ್ಲಿನ ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಸಚಿವ(ಆಡಳಿತ)ರಾಗಿ ಪ್ರೊ.ಗಾಯತ್ರಿ ದೇವರಾಜ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಪ್ರೊಫೆಸರ್ ಗಾಯತ್ರಿ ಅವರು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾಗಿದ್ದು, ಈ ಮೊದಲು ವಿಜ್ಞಾನ ನಿಕಾಯದ ಡೀನ್ ಆಗಿ, ಕುಲಸಚಿವ(ಪರೀಕ್ಷಾಂಗ)ರಾಗಿ, ಐಕ್ಯುಎಸಿ ನಿರ್ದೇಶಕರಾಗಿ ಕಾರ್ಯನಿರ್ವಹಿದ್ದಾರೆ.

ವಿಜ್ಞಾನ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ನೀಡುವ ಡಾ. ಕಲ್ಪನಾ ಚಾವ್ಲಾ ಯುವ ಮಹಿಳಾ ವಿಜ್ಞಾನಿ ಪ್ರಶಸ್ತಿಯನ್ನು ಅವರು ಪಡೆದಿದ್ದು, ಸಂಶೋಧನೆ ಮತ್ತು ಆಡಳಿತಾತ್ಮಕವಾಗಿ ಗುರುತಿಸಿಕೊಂಡಿದ್ದಾರೆ. ಗಾಯತ್ರಿ ದೇವರಾಜ ಅವರನ್ನು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿ. ಹಲಸೆ ಹಾಗೂ ಹಣಕಾಸು ಅಧಿಕಾರಿ ಪ್ರಿಯಾಂಕಾ ಅವರು ಶುಭ ಹಾರೈಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.