ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ, ಪಾಂಡವರು ತಂದೆಗೆ ಹುಟ್ಟಿದವರಲ್ಲ: ಪ್ರೊ. ಭಗವಾನ್‌

Published 9 ಜೂನ್ 2024, 16:28 IST
Last Updated 9 ಜೂನ್ 2024, 16:28 IST
ಅಕ್ಷರ ಗಾತ್ರ

ಹರಿಹರ: ‘ರಾಮಾಯಣದ ಶ್ರೀರಾಮ ಹಾಗೂ ಮಹಾಭಾರತದ ಪಾಂಡವರು ತಮ್ಮ ತಂದೆಯಿಂದ ಹುಟ್ಟಿದವರಲ್ಲ. ಈ ಮಾತಿಗೆ ಪುರಾವೆಗಳಿವೆ’ ಎಂದು ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್‌ ಹೇಳಿದರು.

ನಗರದ ಹೊರವಲಯದ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಮ ದಶರಥ ಮಹಾರಾಜರ ಮಗ ಎಂಬುದಷ್ಟೇ ತಿಳಿದ ವಿಷಯವಾದರೂ, ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ. ಬದಲಾಗಿ ಪುರೋಹಿತನೊಬ್ಬನಿಂದ ಹುಟ್ಟಿದವನು. ಅದೇ ರೀತಿ ಮಹಾಭಾರತದಲ್ಲಿ ಬರುವ ಶಾಪಗ್ರಸ್ಥ ರಾಜ ಪಾಂಡು ಐವರು ಪಾಂಡವರ ತಂದೆ ಎಂದು ಹೇಳಲಾಗುತ್ತಿದ್ದರೂ ಪಾಂಡವರು ಹುಟ್ಟಿದ್ದು ಮಾತ್ರ ದೇವತೆಗಳಿಂದ ಎಂದು ಮಹಾಭಾರತದಲ್ಲೇ ಇದೆ’ ಎಂದರು.

‘ದೇವಸ್ಥಾನ, ಪುರಾಣಗಳಿಂದ ಯಾವುದೇ ಪ್ರಯೋಜನವಿಲ್ಲ. ಈ ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಬಿಟ್ಟು ಉಳಿದೆಲ್ಲ ಜಾತಿ, ಜನಾಂಗದವರನ್ನು ಶೂದ್ರರೆಂದು ಕರೆದಿವೆ. ಶೂದ್ರರೆಲ್ಲಾ ಬ್ರಾಹ್ಮಣರ ಸೇವಕರು ಎಂಬುದನ್ನು ಸಾರಿವೆ. ಮನುಷ್ಯರನ್ನು ಮನುಷ್ಯರಂತೆ ಕಾಣದ ಇಂತಹ ಪುರಾಣ, ಮನುಸ್ಮೃತಿಯಿಂದ ದೇಶದ ಬಹುಸಂಖ್ಯಾತರಿಗೆ ಏನೂ ಪ್ರಯೋಜನವಿಲ್ಲ. ಆದರೆ ಕೆಲವರು ಪುರಾಣ, ಮನುಸ್ಮೃತಿಯನ್ನು ತಲೆ ಮೇಲೆ ಹೊತ್ತು ಅದರ ಪ್ರಕಾರ ಆಡಳಿತ ನಡೆಸುತ್ತೇವೆಂದು ಕುಣಿಯುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.

‘ರಾಜ್ಯದಲ್ಲಿ ನಡೆದ ಜಾತಿಗಣತಿಯ ವಿವರವನ್ನು ರಾಜ್ಯ ಸರ್ಕಾರ ಪ್ರಕಟಿಸಬೇಕು. ಆ ಮೂಲಕ ಶೋಷಿತ ಸಮುದಾಯದವರಿಗೆ ಆಹಾರ, ಉದ್ಯೋಗ, ಶಿಕ್ಷಣ ಸಿಗುವಂತಾಗಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT